ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನು ಸೋನಿಯಾ ಗಾಂಧಿ ಸೂಚಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

Update: 2022-10-12 06:41 GMT
Photo:PTI

ಲಕ್ನೊ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಸೂಚಿಸಿಲ್ಲ ಎಂದು ಹೇಳಿರುವ ಹಿರಿಯ ನಾಯಕ ಹಾಗೂ  ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ Mallikarjun Kharge ಅವರು , ಪಕ್ಷದ ಹಂಗಾಮಿ ಅಧ್ಯಕ್ಷರಿಂದ ಬೆಂಬಲ ಪಡೆಯುವ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ತಮ್ಮ ಹೆಸರನ್ನು ಎಂದಿಗೂ ಸೂಚಿಸಿಲ್ಲ ಹಾಗೂ  ಇದು ವದಂತಿಯಷ್ಟೇ ಎಂದು ಖರ್ಗೆ ಹೇಳಿದರು.

"ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ನನ್ನ ಹೆಸರನ್ನು ಸೂಚಿಸಿರುವುದು ವದಂತಿ, ನಾನು ಇದನ್ನು ಯಾವತ್ತೂ ಹೇಳಿಲ್ಲ. ಗಾಂಧಿ ಕುಟುಂಬದವರು ಯಾರೂ ಚುನಾವಣೆಯ ಭಾಗವಾಗುವುದಿಲ್ಲ ಅಥವಾ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಎಂದು ಸೋನಿಯಾ ಅವರು ಸ್ಪಷ್ಟವಾಗಿ ಹೇಳಿದ್ದಾರೆ'' ಎಂದು ಖರ್ಗೆ ಮಂಗಳವಾರ ಹೇಳಿದರು. 

ಪ್ರಮುಖವಾಗಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ನಡುವೆ ಪೈಪೋಟಿ ಏರ್ಪಟ್ಟಿದೆ.

"ಕಾಂಗ್ರೆಸ್ ಪಕ್ಷ, ಸೋನಿಯಾ ಗಾಂಧಿ ಹಾಗೂ ನನ್ನ ಮಾನಹಾನಿಗಾಗಿ ಯಾರೋ ಈ ವದಂತಿಯನ್ನು ಹಬ್ಬಿಸಿದ್ದಾರೆ. ಸೋನಿಯಾ ಅವರು ಪಕ್ಷದ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಹಾಗೂ ಯಾವುದೇ ಅಭ್ಯರ್ಥಿಯ ಬೆಂಬಲಕ್ಕೆ ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ" ಎಂದು ಖರ್ಗೆ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News