×
Ad

ಪಣಂಬೂರು: ಸಿಐಎಸ್ಎಫ್ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಆತ್ಮಹತ್ಯೆಗೆ ಯತ್ನ

Update: 2022-10-12 12:56 IST

ಪಣಂಬೂರು, ಅ.12: NMPT ಮುಖ್ಯಗೇಟ್ ನಲ್ಲಿ ಕರ್ತವ್ಯದಲ್ಲಿದ್ದ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (CISF) ಇದರ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ.

ರಾಜಸ್ಥಾನದ ಭರತ್ ಪುರ ಜಿಲ್ಲೆಯ ಜ್ಯೋತಿ ಬಾಯಿ (33) ಆತ್ಮಹತ್ಯೆಗೆ ಯತ್ನಿಸಿದ ಸಿಐಎಸ್ಎಫ್ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಎಂದು ತಿಳಿದುಬಂದಿದೆ.

ಘಟನೆ ಇಂದು ಬೆಳಗ್ಗೆ 6 - 6.15ರ ನಡುವೆ ನಡೆದಿದ್ದು, ಗಂಭೀರ ಗಾಯಗೊಂಡಿರುವ ಜ್ಯೋತಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ತನಿಖೆಯಂತೆ ಕೌಟುಂಬಿಕ‌ ಕಾರಣಗಳಿಂದಾಗಿ ಜ್ಯೋತಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಆತ್ಮಹತ್ಯೆಗೆ ಯತ್ನಿಸುವ ಮುನ್ನ ಜ್ಯೋತಿ ಅವರು ಬರೆದಿದ್ದಾರೆ ಎನ್ನಲಾದ ನೋಟ್ ಪೊಲೀಸರಿಗೆ ಲಭ್ಯವಾಗಿದ್ದು, "ಜೀವನದಿಂದ ಮನಸು ತುಂಬಿದೆ. ನನ್ನ ಈ ಸ್ಥಿತಿಗೆ ನಾನೇ ಕಾರಣ" ಎಂದು ಹಿಂದಿಯಲ್ಲಿ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News