ಅ.15ರಂದು ಶಿರೂರಿನಲ್ಲಿ ಉಡುಪಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ
Update: 2022-10-12 19:07 IST
ಉಡುಪಿ, ಅ.12: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಅ.15ರ ಶನಿವಾರ ಬೆಳಗ್ಗೆ 11 ಗಂಟೆಗೆ ಉಡುಪಿ ತಾಲೂಕು ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿರೂರು ಗ್ರಾಮದ ಕಲ್ಲಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಶಿರೂರು ಗ್ರಾಮದ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮಕರಣಿಕರ ಕಚೇರಿಯಲ್ಲಿ ನೀಡಬಹುದು ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.