×
Ad

ಹಿಜಾಬ್‌ ನಿಷೇಧ:‌ ಸುಪ್ರೀಂಕೋರ್ಟ್‌ ನಾಳೆ ತೀರ್ಪು ಪ್ರಕಟಿಸುವ ಸಾಧ್ಯತೆ

Update: 2022-10-12 20:24 IST

ಹೊಸದಿಲ್ಲಿ: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುವ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಹು ನಿರೀಕ್ಷಿತ ಸುಪ್ರೀಂ ಕೋರ್ಟ್ ತೀರ್ಪನ್ನು ಗುರುವಾರ ಇಬ್ಬರು ನ್ಯಾಯಾಧೀಶರು ನೀಡುವ ನಿರೀಕ್ಷೆಯಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು 10 ದಿನಗಳ ವಾದಗಳನ್ನು ಆಲಿಸಿದ ನಂತರ ಸೆಪ್ಟೆಂಬರ್ 22 ರಂದು ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿತ್ತು.

ಪೀಠದ ನೇತೃತ್ವ ವಹಿಸಿರುವ ನ್ಯಾಯಮೂರ್ತಿ ಗುಪ್ತಾ ಅವರು ರವಿವಾರ ನಿವೃತ್ತರಾಗಲಿರುವ ಕಾರಣ ಈ ವಾರ ಈ ಅರ್ಜಿಗಳ ತೀರ್ಪು ನಿರೀಕ್ಷಿಸಲಾಗಿದೆ.

ಸುಪ್ರೀಂ ಕೋರ್ಟ್‌ನಲ್ಲಿ ವಾದದ ಸಮಯದಲ್ಲಿ, ಅರ್ಜಿದಾರರ ಪರ ಹಾಜರಾದ ವಕೀಲರು, ಮುಸ್ಲಿಂ ಹುಡುಗಿಯರು ತರಗತಿಗೆ ಹಿಜಾಬ್ ಧರಿಸುವುದನ್ನು ತಡೆಯುವುದರಿಂದ ಅವರ ಶಿಕ್ಷಣಕ್ಕೆ ತೊಂದರೆಯಾಗುತ್ತದೆ ಮತ್ತು ಅವರು ತರಗತಿಗಳಿಗೆ ಹಾಜರಾಗುವುದನ್ನು ನಿಲ್ಲಿಸಬಹುದು ಎಂದು ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News