ಕ್ರಿಶ್ಚಿಯನ್-ಮುಸ್ಲಿಮರಿಗೆ ನೀಡಿರುವ OBC ಕೋಟಾ ಕಡಿತಗೊಳಿಸಿ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಶಾಸಕ ಅರವಿಂದ ಬೆಲ್ಲದ್

Update: 2022-10-12 16:32 GMT

ಬೆಂಗಳೂರು, ಅ.12: ಸಂವಿಧಾನದ ಪ್ರಕಾರ ಜಾತಿಗಳ ಪ್ರಕಾರ ಮೀಸಲಾತಿ ಇದೆ. ಆದರೆ, ಧರ್ಮಗಳ ಪ್ರಕಾರ ಯಾವುದೇ ರೀತಿಯ ಮೀಸಲಾತಿ ಇಲ್ಲ. ಈ ಹಿಂದಿನ ಕಾಂಗ್ರೆಸ್ ಸರಕಾರ ಹಿಂದುಳಿದ ವರ್ಗ(ಒಬಿಸಿ)ಗಳಿಗೆ ನೀಡಬೇಕಾಗಿರುವ ಹಕ್ಕನ್ನು ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಸಮಾಜಕ್ಕೆ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಅವರು, ಈ ಧರ್ಮಗಳೆಲ್ಲವೂ ಅಲ್ಪಸಂಖ್ಯಾತರ ಇಲಾಖೆಗೆ ಒಳಪಟ್ಟಿದ್ದು, ಈ ಇಲಾಖೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಅನುದಾನ ಬರುತ್ತಿದ್ದು, ಈ ನಿಟ್ಟಿನಲ್ಲಿ ಸಾಕಷ್ಟು ಅಭಿವೃದ್ಧಿಗಳು ಆಗುತ್ತಿವೆ ಎಂದು ತಿಳಿಸಿದ್ದಾರೆ.

ಆದರೆ ಹಿಂದುಳಿದ ವರ್ಗಗಳ ಸಮಾಜಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಕ್ರಿಶ್ಚಿಯನ್ ಮತ್ತು ಮುಸ್ಲಿಮ್ ಸಮಾಜಗಳಿಗೆ ಒಬಿಸಿ ಕೋಟಾದಲ್ಲಿ ನೀಡಿರುವ ಸೌಲಭ್ಯಗಳನ್ನು ಕಡಿತಗೊಳಿಸಿ ಪ್ರಸ್ತುತ ಮೀಸಲಾತಿ ಕೇಳುತ್ತಿರುವ ಲಿಂಗಾಯತ ಪಂಚಮಸಾಲಿ, ಉಳಿದ ಎಲ್ಲ ಲಿಂಗಾಯತ ಒಳ ಪಂಗಡಗಳು, ಕುರುಬ, ಮರಾಠಾ, ಇತ್ಯಾದಿ ಸಮಾಜಗಳಿಗೆ ನೀಡಿ, ಹಲವಾರು ವರ್ಷಗಳಿಂದ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಎಂದು ಅರವಿಂದ ಬೆಲ್ಲದ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News