ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಚಿಂತಾಜನಕ

Update: 2022-10-12 18:04 GMT
ಟಿ.ಎಸ್.ಲೋಹಿತಾಶ್ವ (Photo credit: wikipedia)

ಬೆಂಗಳೂರು, ಅ.12: ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. 

ಇಲ್ಲಿನ ಕುಮಾರಸ್ವಾಮಿ ಲೇಔಟ್‍ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಲೋಹಿತಾಶ್ವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಸಧ್ಯಕ್ಕೆ ಏನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಲೋಹಿತಾಶ್ವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಮೆದುಳು ಶೇ.95ರಷ್ಟು ಕೆಲಸ ಮಾಡ್ತಿಲ್ಲ. ವೆಂಟಿಲೇಟರ್ ನಲ್ಲಿ ಇರಿಸಲಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಕಂಚಿನ ಕಂಠದ ನಟ ಲೋಹಿತಾಶ್ವ ಹಲವಾರು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರ ಹಾಗೂ ಖಳನಾಯಕನ ಪಾತ್ರಗಳಲ್ಲಿ ನಟಿಸಿದ್ದಾರೆ. ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಹಾಗೂ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News