2,052 ಕಡೆ ರಾಜಕಾಲುವೆಗಳ ಒತ್ತುವರಿ ತೆರವು: ಹೈಕೋರ್ಟ್ ಗೆ ಹೇಳಿಕೆ
Update: 2022-10-12 23:59 IST
ಬೆಂಗಳೂರು, ಅ.12: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2,052 ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಲಾಗಿದೆ ಎಂದು ಹೈಕೋರ್ಟ್‍ಗೆ ಬಿಬಿಎಂಪಿ ಹೇಳಿದೆ.
ಕೆರೆಗಳ ಸಂರಕ್ಷಣೆ ಮತ್ತು ಪುನರುಜ್ಜೀವನ ಕುರಿತು ‘ಸಿಟಿಜನ್ ಆ್ಯಕ್ಷನ್ ಗ್ರೂಪ್’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಬಿಬಿಎಂಪಿ ಪರ ವಕೀಲರು, ನ್ಯಾಯಪೀಠಕ್ಕೆ ರಾಜಕಾಲುವೆ ಒತ್ತುವರಿ ತೆರವಿಗೆ ಕುರಿತಂತೆ ವರದಿಯನ್ನು ಸಲ್ಲಿಸಿದರು.
ನಗರದಲ್ಲಿ ಒಟ್ಟು 2,626 ಕಡೆ ರಾಜಕಾಲುವೆ ಒತ್ತುವರಿ ಗುರುತಿಸಲಾಗಿದೆ. ಅವುಗಳ ಪೈಕಿ 2,052 ಒತ್ತುವರಿ ತೆರವುಗೊಳಿಸಲಾಗಿದೆ. ಉಳಿದ ಒತ್ತುವರಿಗಳ ತೆರವು ಕಾರ್ಯ ಪ್ರಗತಿಯಲ್ಲಿದೆ ಎಂದು ಪಾಲಿಕೆ ಪರ ವಕೀಲರು ಪೀಠಕ್ಕೆ ತಿಳಿಸಿದರು.