ಸಮಸ್ತ ಕೇಂದ್ರ ಮುಶಾವರ ಸದಸ್ಯ ಉಸ್ಮಾನುಲ್ ಫೈಝಿಗೆ ಸನ್ಮಾನ
ಬಂಟ್ವಾಳ, ಅ.13: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರದ ನೂತನ ಸದಸ್ಯರಾಗಿ ಆಯ್ಕೆಯಾದ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದ ಉಪಾಧ್ಯಕ್ಷ, ಸಮಸ್ತ ಕೇರಳ ಜಂಇಯ್ಯತುಲ್ ಮುದರ್ರಿಸೀನ್ ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷ. ಉಳ್ಳಾಲ ಸೈಯದ್ ಮದನಿ ಅರಬಿಕ್ ಕಾಲೇಜಿನ ಪ್ರಾಂಶುಪಾಲ ಶೈಖುನಾ ಕೆ.ಎಂ ಉಸ್ಮಾನುಲ್ ಫೈಝಿ ತೋಡಾರು ಅವರನ್ನು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕರ್ನಾಟಕ ಮುಶಾವರದ ವತಿಯಿಂದ ಬಿ.ಸಿರೋಡು ತಲಪಾಡಿಯ ಸಮಸ್ತ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಸಮಸ್ತ ಕೇಂದ್ರ ಮುಶಾವರ ಸದಸ್ಯರೂ, ಕರ್ನಾಟಕ ಮುಶಾವರದ ಪ್ರಧಾನ ಕಾರ್ಯದರ್ಶಿಯೂ ಆದ ಖಾಝಿ ಬಿ.ಕೆ. ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ ಅಧ್ಯಕ್ಷತೆ ವಹಿಸಿದ್ದರು. ಇಸ್ಮಾಯಿಲ್ ಫೈಝಿ ಸೂರಿಂಜೆ ಕಾರ್ಯಕ್ರಮ ಉದ್ಘಾಟಿಸಿದರು.
ಒಮಾನ್ ಅಬೂಬಕರ್ ಸಿದ್ದೀಕ್ ದಾರಿಮಿ ಮೂಡುಬಿದಿರೆ, ಫೈಝೀಸ್ ಅಸೋಸಿಯೇಶನ್ ರಾಜ್ಯ ಉಪಾಧ್ಯಕ್ಷ ಅಶ್ರಫ್ ಫೈಝಿ ಮಿತ್ತಬೈಲು, ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಉಪಾಧ್ಯಕ್ಷ ಕೆ.ಎಂ. ಖಾಸಿಂ ದಾರಿಮಿ ನಂದಾವರ, ಎಸ್‌ವೈಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಲ್. ಉಮರ್ ದಾರಿಮಿ ಪಟ್ಟೋರಿ, ಸಮಸ್ತ ವಿದ್ಯಾಭ್ಯಾಸ ಮಂಡಳಿಯ ರಶೀದ್ ಹಾಜಿ ಪರ್ಲಡ್ಕ, ದಾರಿಮೀಸ್ ಜಿಲ್ಲಾಧ್ಯಕ್ಷ ಕೆ.ಬಿ. ಅಬ್ದುಲ್ ಖಾದರ್ ದಾರಿಮಿ ಕೊಡುಂಗಾಯಿ, ಎಸ್‌ವೈಎಸ್ ಪುತ್ತೂರು ವಲಯಾಧ್ಯಕ್ಷ ಹಾಜಿ ಅಬೂಬಕರ್ ಮುಲಾರ್, ಶರೀಫ್ ಮೂಸಾ ಕುದ್ದುಪದವು, ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ, ಅಬ್ದುರ‌್ರಹ್ಮಾನ್ ನದ್ವಿ, ಇಸ್ಮಾಯಿಲ್ ಯಮಾನಿ ತಿಂಗಳಾಡಿ ಮತ್ತಿತರರು ಉಪಸ್ಥಿತರಿದ್ದರು.
ಸಮಸ್ತ ಕರ್ನಾಟಕ ಮುಶಾವರದ ಸಂಘಟನಾ ಕಾರ್ಯದರ್ಶಿ ಕೆ.ಪಿ.ಎಂ. ಶರೀಫ್ ಫೈಝಿ ಕಡಬ ಸ್ವಾಗತಿಸಿದರು. ಕಾರ್ಯದರ್ಶಿ ಕುಕ್ಕಿಲ ಅಬ್ದುಲ್ ಖಾದಿರ್ ದಾರಿಮಿ ವಳಚ್ಚಿಲ್ ವಂದಿಸಿದರು.