×
Ad

ಗುಜರಾತ್, ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ: ಇಂದು ಮಧ್ಯಾಹ್ನ ವೇಳಾಪಟ್ಟಿ ಪ್ರಕಟ

Update: 2022-10-14 10:24 IST
Photo:NDTV

ಹೊಸದಿಲ್ಲಿ:ಗುಜರಾತ್ ಹಾಗೂ  ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಲಾಗುವುದು. ಚುನಾವಣಾ ಆಯೋಗ ಮಧ್ಯಾಹ್ನ 3 ಗಂಟೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಗುಜರಾತ್ ಅಸೆಂಬ್ಲಿಯ ಅವಧಿ ಮುಂದಿನ ವರ್ಷ ಫೆಬ್ರವರಿ 18 ರಂದು ಕೊನೆಗೊಳ್ಳುತ್ತದೆ ಹಾಗೂ  ಹಿಮಾಚಲ ಪ್ರದೇಶದ ಅವಧಿಯು ಜನವರಿ 8 ರಂದು ಕೊನೆಗೊಳ್ಳುತ್ತದೆ. ಆಯೋಗದ ಅಧಿಕಾರಿಗಳು ಇತ್ತೀಚೆಗೆ ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಲು ಎರಡೂ ರಾಜ್ಯಗಳಿಗೆ ಭೇಟಿ ನೀಡಿದ್ದರು.

ಗುಜರಾತ್ ವಿಧಾನಸಭೆಯು 182 ಸ್ಥಾನಗಳನ್ನು ಹೊಂದಿದ್ದು, ಬಹುಮತಕ್ಕೆ 92 ಸ್ಥಾನದ ಅಗತ್ಯವಿದೆ. ಆದರೆ 68 ಸ್ಥಾನಗಳ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಬಹುಮತಕ್ಕೆ 35 ಸ್ಥಾನ ಬೇಕು.

2017 ರ ಚುನಾವಣೆಯಲ್ಲಿ, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 44 ಮತ್ತು ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಗುಜರಾತ್‌ನಲ್ಲಿ ಬಿಜೆಪಿ 99 ಹಾಗೂ  ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದಿತ್ತು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರ ಸತತ ರ್ಯಾಲಿಗಳು ಹಾಗೂ ಭೇಟಿಗಳು ಎರಡು ರಾಜ್ಯಗಳಲ್ಲಿ ಮುಂಬರುವ ಚುನಾವಣೆಗೆ ವೇದಿಕೆಯನ್ನು ಸಿದ್ಧಪಡಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News