ಕೊಣಾಜೆ: ಯುವಕ ಆತ್ಮಹತ್ಯೆ
Update: 2022-10-14 12:39 IST
ಕೊಣಾಜೆ, ಅ.14: ಕೊಣಾಜೆ ಗ್ರಾಮದ ಬೆಳ್ಮ ಬಳಿ ವಿವಾಹಿತ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೈದ (Suicide) ಘಟನೆ ಶುಕ್ರವಾರ ನಡೆದಿರುವುದು ವರದಿಯಾಗಿದೆ.
ಆತ್ಮಹತ್ಯೆಗೈದವರನ್ನು ಚರಣ್ (35) ಎಂದು ಗುರುತಿಸಲಾಗಿದೆ. ಬ್ಯಾಂಕ್ ಉದ್ಯೋಗಿಯಾಗಿರುವ ಇವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಪತ್ನಿ ಮಕ್ಕಳೊಂದಿಗೆ ತಾಯಿ ಮನೆಗೆ ಹೋಗಿದ್ದ ವೇಳೆ ಚರಣ್ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.