ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಶ್ವದ ಅತಿದೊಡ್ಡ ವಾಣಿಜ್ಯ ವಿಮಾನ

Update: 2022-10-14 12:52 GMT

ಬೆಂಗಳೂರು, ಅ.14: ವಿಶ್ವದ ಅತಿದೊಡ್ಡ ಏರ್‌ಬಸ್ A380 ಡಬಲ್ ಡೆಕ್ಕರ್ ವಿಮಾನ ಇಂದು ಮೊದಲಬಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಸಾಕ್ಷಿಯಾದರು.

ವಿಮಾನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಮಾತನಾಡಿದ ಸಚಿವರು, ವಿಶ್ವದ ಅತಿ ದೊಡ್ಡ ನಾಗರಿಕ ವಿಮಾನಯಾನ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಎಮಿರೇಟ್ಸ್ ಏರ್‌ಲೈನ್ಸ್‌ ಗೆ ಅನಂತ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

A380 ವಿಮಾನವು ಮುಂಬೈ ನಂತರ ಹಾರಾಟ ನಡೆಸುತ್ತಿರುವ ಎರಡನೇ ನಗರ ಎಂಬ ಹೆಗ್ಗಳಿಕೆಗೆ ಬೆಂಗಳೂರು ಪಾತ್ರವಾಗಿದೆ ಎಂದು ಹೇಳಿದರು.

ಯುನೈಟೆಡ್ ಅರಬ್ ಎಮಿರೇಟ್ಸ್ ಜೊತೆಗೆ ಭಾರತವು ಸಾಂಸ್ಕೃತಿಕ, ಆರ್ಥಿಕ ಮತ್ತು ಧಾರ್ಮಿಕವಾಗಿ ಸಾಕಷ್ಟು ಸ್ನೇಹಬಾಂದವ್ಯ ಹೊಂದಿದೆ. ಎಮಿರೇಟ್ಸ್‌ ವಿಮಾನ ಹಾರಾಟದಿಂದ ಎರಡು ದೇಶಗಳ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News