ಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು

Update: 2022-10-14 15:05 GMT

ಬೆಂಗಳೂರು, ಅ.14: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಇಲ್ಲಿನ ಯಶವಂತಪುರ ಪೆÇಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.

ಕರ್ನಾಟಕ ಮತಾಂತರ ನಿಷೇಧ ಕಾಯ್ದೆಯಡಿ ಯಶವಂತಪುರದ ಬಿಕೆ ನಗರ ನಿವಾಸಿ ಎಸ್.ಮೊಯಿನ್ (23) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶ ಮೂಲದ 19 ವರ್ಷದ ಯುವತಿಯನ್ನು ಕರೆದೊಯ್ದು ಮೊಯಿನ್ ಆಂಧ್ರಪ್ರದೇಶದಲ್ಲಿ ಮತಾಂತರ ಮಾಡಿದ್ದ ಎಂಬ ದೂರಿನ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂತ್ರಸ್ತ ಯುವತಿಗೆ ಆರೋಪಿ ಹೇಗೆ ಪರಿಚಯ, ಆತ ಹಿಂದೆ ಯಾರಾರು ಇದ್ದಾರೆ ಎನ್ನುವ ಕುರಿತು ಮಾಹಿತಿ ಪಡೆಯಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News