ಉಡುಪಿ: ಬುದ್ಧಿಮಾಂದ್ಯ ಯುವಕ ನಾಪತ್ತೆ

Update: 2022-10-14 15:44 GMT

ಉಡುಪಿ: ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ಸಾಲ್ಮರ ಸ್ಪಂದನ ಬುದ್ಧಿಮಾಂದ್ಯ ವಸತಿ ಕೇಂದ್ರದಲ್ಲಿ ವಾಸವಿದ್ದ ಶಿವ (21) ಎಂಬ ಯುವಕ ಅ.8ರಂದು ಬೆಳಗ್ಗೆ 11 ಗಂಟೆಯಿಂದ ನಾಪತ್ತೆಯಾಗಿದ್ದಾರೆ.

5 ಅಡಿ 6 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ನಂ. 0820-2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966 ಹಾಗೂ ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 08250- 2561044ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News