×
Ad

ಸಾಲ ಪಡೆದ ವಿವರಣೆ ನೀಡದ ಹಿನ್ನೆಲೆ; ನಿರ್ಮಾಪಕ ಜಿ.ರಘುನಾಥ್‍ಗೆ ಹೈಕೋರ್ಟ್ ನಿಂದ ಜಾಮೀನು ನಿರಾಕರಣೆ

Update: 2022-10-14 23:21 IST

ಬೆಂಗಳೂರು, ಅ.14: ನಗರದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ನಿಂದ 60 ಕೋಟಿ ರೂ.ಸಾಲ ಪಡೆದು ಅದನ್ನು ಯಾವುದಕ್ಕೆ ಬಳಕೆ ಮಾಡಲಾಗಿದೆ ಎಂಬುದರ ಕುರಿತಂತೆ ವಿವರಣೆ ನೀಡದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಲನಚಿತ್ರ ನಿರ್ಮಾಪಕ ಮತ್ತು ಉದ್ಯಮಿ ಜಿ.ರಘುನಾಥ್ ಅವರಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. 

ಕಾರಾಗೃಹದಲ್ಲಿರುವ ರಘುನಾಥ್ ಈ ಕುರಿತಂತೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.

ಅರ್ಜಿದಾರರು 60 ಕೋಟಿ ರೂ. ಸಾಲದ ರೂಪದಲ್ಲಿ ಪಡೆದಿರುವ ಪ್ರಕ್ರಿಯೆ ಕಾನೂನಿಗೆ ವಿರುದ್ಧವಾಗಿದೆ. ಈ ಸಾಲವನ್ನು  ಎಲ್ಲಿ ಹೂಡಿಕೆ ಮಾಡಲಾಗಿದೆ ಎಂಬ ವಿವರಗಳನ್ನು ಅವರು ನ್ಯಾಯಾಲಯಕ್ಕೆ ತಿಳಿಸಿಲ್ಲ. ಇಂಥ ಸಂದರ್ಭದಲ್ಲಿ ಜಾಮೀನು ನೀಡಿದರೆ ಅವರು ತಮ್ಮ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡದಂತೆ ತಡೆಯುವ ಎಲ್ಲ ಸಾಧ್ಯತೆಗಳಿವೆ. ಹೀಗಾಗಿ, ಈ ಹಂತದಲ್ಲಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News