ಭಾರತ್ ಜೋಡೊ ಯಾತ್ರೆ: ಬಳ್ಳಾರಿ ಹಲಕುಂದಿ ಮಠದಿಂದ ರಾಹುಲ್ ಗಾಂಧಿ ಯಾತ್ರೆ ಆರಂಭ
Update: 2022-10-15 09:53 IST
ಬಳ್ಳಾರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯು ಬಳ್ಳಾರಿ ನಗರ ಪ್ರವೇಶಿಸಿದ್ದು, ಇಂದು ಬೆಳಗ್ಗೆ ಹಲಕುಂದಿ ಮಠದಿಂದ ಯಾತ್ರೆ ಆರಂಭಿಸಿದ್ದಾರೆ.
ಮಧ್ಯಾಹ್ನ 1.30ರ ವೇಳೆಗೆ ಬಳ್ಳಾರಿ ಮುನ್ಸಿಪಲ್ ಮೈದಾನದಲ್ಲಿ ರಾಹುಲ್ ಗಾಂಧಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ.
ಪಾದಯಾತ್ರೆ ಬಳಿಕ ಸಂಗನಕಲ್ ಗ್ರಾಮಕ್ಕೆ ತೆರಳಲಿರುವ ರಾಹುಲ್ ಗಾಂಧಿ, ಅಲ್ಲಿಯೇ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ನಿನ್ನೆ ಸಂಜೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಬಳ್ಳಾರಿ ಜಿಲ್ಲೆಯ ಗಡಿ ಬಳಿ ಸ್ವಾಗತಿಸಲಾಗಿತ್ತು.