ಕರ್ನಾಟಕಕ್ಕೆ ವಿದಾಯ ಹೇಳುವ ಮುನ್ನ...: ರಾಹುಲ್ ಗಾಂಧಿಗೆ ಬಿಜೆಪಿಯ ಸಲಹೆ ಏನು?

Update: 2022-10-15 07:52 GMT

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯು ಇಂದು ಬಳ್ಳಾರಿ ನಗರ ಪ್ರವೇಶಿಸಿದ್ದು, ಮಧ್ಯಾಹ್ನ ವೇಳೆ ನಗರದಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದೆ.

ಇನ್ನು ರಾಜ್ಯದಲ್ಲಿ 14ನೇ ದಿನಕ್ಕೆ ಕಾಲಿಟ್ಟಿರುವ ಭಾರತ್ ಜೋಡೊ ಯಾತ್ರೆ ವಿರುದ್ಧ ವಾಗ್ದಾಳಿಗಿಳಿದಿರುವ ಬಿಜೆಪಿ, ರಾಹುಲ್ ಗಾಂಧಿ ಅವರಿಗೆ 'ಕರ್ನಾಟಕದಲ್ಲೇ ಇಂಧನ ತುಂಬಿಸಿ' ಎಂದು ಸಲಹೆ ನೀಡಿದೆ. 

ಇದನ್ನೂ ಓದಿ>>> ಬಳ್ಳಾರಿ ನಗರ ಪ್ರವೇಶಿಸಿದ ಭಾರತ್ ಜೋಡೊ ಯಾತ್ರೆ: ರಾಹುಲ್ ಗಾಂಧಿಗೆ ಸಚಿವ ಶ್ರೀರಾಮುಲು ಸ್ವಾಗತ ಕೋರಿದ್ದು ಹೀಗೆ...

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ,  'ಕರ್ನಾಟಕಕ್ಕೆ ವಿದಾಯ ಹೇಳುವ ಮುನ್ನ ರಾಹುಲ್ ಗಾಂಧಿ  ಅವರಿಗೆ ಮತ್ತೊಮ್ಮೆ ನೆನಪಿಸುತ್ತಿದ್ದೇವೆ. ಮುಂದಿನ ಯಾತ್ರೆಗೆ ಕರ್ನಾಟಕದಲ್ಲೇ ಇಂಧನ ತುಂಬಿಸಿ.  ಡಿಸೇಲ್‌ ದರ/ಲೀ. ಆಂಧ್ರಪ್ರದೇಶ - 99.15 ತೆಲಂಗಾಣ - 97.82 ರಾಜಸ್ಥಾನ - 93.72 ಕರ್ನಾಟಕ - 87.94 ಬಿಜೆಪಿಯೇತರ ರಾಜ್ಯದಲ್ಲಿ ಬೆಲೆ ಏರಿಕೆಯ ಬಿಸಿ ತಾಗಬಹುದು!' ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತನಿಗೆ ಸ್ನೇಹಿತನಿಂದಲೇ ಹಲ್ಲೆ; ಕೋಮು ಸಾಮರಸ್ಯ ಕದಡಲು ಸುಳ್ಳು ದೂರು

''ರಾಜ್ಯದ ಪ್ರಬಲ ವೀರಶೈವ ಲಿಂಗಾಯತ ನಾಯಕ, ಮುಖ್ಯಮಂತ್ರಿಯಾಗಿದ್ದ ವೀರೇಂದ್ರ ಪಾಟೀಲರನ್ನು ಅತ್ಯಂತ ಅಮಾನವೀಯವಾಗಿ ರಾಜೀವ್ ಗಾಂಧಿ ಪದಚ್ಯುತಗೊಳಿಸಿದ್ದರು. ರಾಹುಲ್‌ ಗಾಂಧಿ‌ ಅವರೇ, ತಮ್ಮದೇ ಪಕ್ಷದ ವೀರಶೈವ ಲಿಂಗಾಯತ ನಾಯಕನೊಬ್ಬನನ್ನು ರಾಜಕೀಯವಾಗಿ ತುಳಿದ ಘಟನೆಯನ್ನು‌ ಕರ್ನಾಟಕ ಬಿಡುವ ಮುನ್ನ ಒಮ್ಮೆ ನೆನಪಿಸಿಕೊಳ್ಳಿ'' ಎಂದು ಬಿಜೆಪಿ ಟ್ವೀಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News