×
Ad

ಚಾಕು ಇರಿತ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Update: 2022-10-15 18:20 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.15: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪ ಪ್ರಕರಣ ಸಂಬಂಧ ನಾಲ್ವರನ್ನು ಇಲ್ಲಿನ ಕೋಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. 

ರೋಹಿತ್, ಗೌಸ್‍ವುದ್ದೀನ್, ಮಂಜುನಾಥ್ ಮತ್ತು ಭಾಗೇಶ್ ಬಂಧಿತ ಆರೋಪಿಗಳೆಂದು ಪೊಲೀಸರು ಹೇಳಿದ್ದಾರೆ.

ಅ.9ರಂದು ಹಲ್ಲೆಗೊಳಗಾದ ಅಶ್ವತ್ಥ್ ಕುಮಾರ್ ಅವರು ಅಂಗಡಿಗೆ ಹೋಗಿದ್ದು, ಇಲ್ಲಿನ ದೇವಿನಗರ ಬಸ್ ನಿಲ್ದಾಣ ಹತ್ತಿರದ ಮದ್ಯದಂಗಡಿಯಲ್ಲಿ ಮದ್ಯ ಸೇವಿಸಿ ಇಬ್ಬರು ರಸ್ತೆಯಲ್ಲಿ ಸಾರ್ವಜನಿಕರಿಗೆ ನಿಂದನೆ ಮಾಡುತ್ತಿದ್ದರು.

ಈ ವೇಳೆ ಇದನ್ನು ಅಶ್ವತ್ಥ್ ಕುಮಾರ್ ಪ್ರಶ್ನಿಸಿದ್ದರು. ಇದೇ ವಿಚಾರಕ್ಕೆ ಆರೋಪಿಗಳು ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News