ನೀಲಾವರ- ಬಾವಲಿಕುದ್ರು ರಸ್ತೆ ಕಾಂಕ್ರೀಟಿಕರಣಕ್ಕೆ ಚಾಲನೆ
Update: 2022-10-15 20:41 IST
ಉಡುಪಿ, ಅ.15: ಉಡುಪಿ ವಿಧಾನಸಭಾ ಕ್ಷೇತ್ರದ ನೀಲಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹು ಬೇಡಿಕೆಯ ನೀಲಾವರ- ಬಾವಲಿಕುದ್ರು ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಕೆ.ರಘುಪತಿ ಭಟ್ ಶನಿವಾರ ಚಾಲನೆ ನೀಡಿದರು.
ಶಾಸಕರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಯೋಜನೆಯಡಿ 50 ಲಕ್ಷ ರೂ. ಈ ಕಾಮಗಾರಿಗೆ ಮಂಜೂರಾಗಿದೆ. ಈ ರಸ್ತೆ ಕಾಮಗಾರಿಗೆ ಇಂದು ಕೆ.ರಘುಪತಿ ಭಟ್ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ನೀಲಾವರ ಗ್ರಾಪಂ ಅಧ್ಯಕ್ಷ ಮಹೇಂದ್ರ ಕುಮಾರ್, ಉಪಾಧ್ಯಕ್ಷೆ ಬೇಬಿ, ರಾಜ್ಯ ಎಸ್‌ಟಿ ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ನೀಲಾವರ ಗ್ರಾಪಂನ ಸರ್ವ ಸದಸ್ಯರು ಉಪಸ್ಥಿತರಿದ್ದರು.