ಹಾಸನ | ಸರಣಿ ಅಪಘಾತ: ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ಮೃತ್ಯು

Update: 2022-10-15 19:52 GMT

ಹಾಸನ, ಆ.16: ಅರಸೀಕೆರೆ ತಾಲೂಕು ಗಾಂಧಿನಗರ ಗ್ರಾಮದ ಸಮೀಪ ಸರಣಿ ಅಪಘಾತ ಸಂಭವಿಸಿ ನಾಲ್ವರು ಮಕ್ಕಳು ಸೇರಿದಂತೆ 9 ಜನರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಸಾರಿಗೆ ಬಸ್, ಟೆಂಪೋ ಟ್ರಾವೆಲರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. 

ಸರ್ಕಾರಿ ಬಸ್ ಮತ್ತು ಟ್ಯಾಂಕರ್ ನಡುವೆ ಸಿಲುಕಿದ ಟೆಂಪೋ ಟ್ರಾವೆಲರ್ ನಜ್ಜು ಗುಜ್ಜಾಗಿದ್ದು,  ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರೆಲ್ಲರೂ ಅರಸೀಕೆರೆ ತಾಲೂಕಿನ ಬಾಣವಾರ ಗ್ರಾಮದವರು ಎನ್ನಲಾಗಿದೆ.

ಟೆಂಪೋ ಟ್ರಾವೆಲರ್ ನಲ್ಲಿದ್ದವರು ಧರ್ಮಸ್ಥಳಕ್ಕೆ ಹೋಗಿ ಬಾಣವಾರ ಗ್ರಾಮದ ತಮ್ಮೂರಿಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆನ್ನಲಾಗಿದೆ. 

ಮೃತದೇಹವನ್ನು ಅರಸೀಕೆರೆ ಗ್ರಾಮದ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳನ್ನು ಹಾಸನದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಸಂಘಪರಿವಾರದ ಕಾರ್ಯಕರ್ತನಿಗೆ ಸ್ನೇಹಿತನಿಂದಲೇ ಹಲ್ಲೆ; ಕೋಮು ಸಾಮರಸ್ಯ ಕದಡಲು ಸುಳ್ಳು ದೂರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News