×
Ad

ಸೋಮವಾರ ವಿಚಾರಣೆಗೆ ಹಾಜರಾಗಲು ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸಿಬಿಐ ಸಮನ್ಸ್

Update: 2022-10-16 12:35 IST
Photo:twitter

ಹೊಸದಿಲ್ಲಿ: ವಿವಾದಿತ ದಿಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ Delhi Deputy Chief Minister Manish Sisodia ಅವರನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಕೇಂದ್ರೀಯ ತನಿಖಾ ಸಂಸ್ಥೆಯು (ಸಿಬಿಐ) ವಿಚಾರಣೆಗೆ ಕರೆಸಿದೆ.

ಇತ್ತೀಚಿನ ಸಮನ್ಸ್‌ಗೆ ಪ್ರತಿಕ್ರಿಯಿಸಿದ ಸಿಸೋಡಿಯಾ, ಈ ಹಿಂದೆ ಸಿಬಿಐ ದಾಳಿಗಳಲ್ಲಿ ಏನೂ ಪತ್ತೆಯಾಗಿಲ್ಲ. ಆದರೆ ತಾನು ತನಿಖಾ ಸಂಸ್ಥೆಗೆ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಹೇಳಿದರು.

“ಸಿಬಿಐ ನನ್ನ ಮನೆಯ ಮೇಲೆ 14 ಗಂಟೆಗಳ ಕಾಲ ದಾಳಿ ನಡೆಸಿತು. ಅದರಿಂದ ಏನೂ ಹೊರಬರಲಿಲ್ಲ, ಅವರು ನನ್ನ ಬ್ಯಾಂಕ್ ಲಾಕರ್ ಅನ್ನು ಹುಡುಕಿದರು ಹಾಗೂ  ಏನೂ ಕಂಡುಬಂದಿಲ್ಲ.  ಅವರಿಗೆ ನನ್ನ ಗ್ರಾಮದಲ್ಲಿ ಏನೂ ಲಭಿಸಿಲ್ಲ’’ ಎಂದು ಸಿಸೋಡಿಯಾ ಹೇಳಿದ್ದಾರೆ.

ಈಗ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಸಿಬಿಐ ಕೇಂದ್ರ ಕಚೇರಿಗೆ ನನ್ನನ್ನು ಕರೆದಿದ್ದಾರೆ. ನಾನು ಹೋಗಿ ನನ್ನ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

ಯಾವುದೇ ಹಗರಣ ನಡೆದಿಲ್ಲ ಎಂದು ಆಮ್ ಆದ್ಮಿ ಪಕ್ಷ ಸಮರ್ಥಿಸಿಕೊಂಡಿದ್ದು, ರಾಜಕೀಯ ಸೇಡಿಗಾಗಿ ಸಿಸೋಡಿಯಾ  ಅವರನ್ನು ಈ ಪ್ರಕರಣಕ್ಕೆ ಎಳೆದು ತರಲಾಗಿದೆ. ಸಿಸೋಡಿಯಾ ವಿರುದ್ಧ ಸಾಕ್ಷ್ಯಾಧಾರಗಳಿದ್ದರೆ ಅವರನ್ನು ಬಂಧಿಸುವಂತೆ ಕೇಜ್ರಿವಾಲ್ ಕೇಂದ್ರಕ್ಕೆ ಸವಾಲು ಎಸೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News