ಅಧ್ಯಕ್ಷೀಯ ಚುನಾವಣೆಗೆ ರಾಹುಲ್ ಗಾಂಧಿ ಎಲ್ಲಿ ಮತ ಚಲಾಯಿಸುತ್ತಾರೆಂಬ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಕಾಂಗ್ರೆಸ್

Update: 2022-10-16 09:49 GMT
Photo:PTI

ಹೊಸದಿಲ್ಲಿ: ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕರ್ನಾಟಕದ ಬಳ್ಳಾರಿಯಿಂದ ಪಕ್ಷದ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸಲಿದ್ದಾರೆ ಎಂದು ಕಾಂಗ್ರೆಸ್ ಸಂವಹನ ಮುಖ್ಯಸ್ಥ ಜೈರಾಮ್ ರಮೇಶ್ ಇಂದು ಸ್ಪಷ್ಟಪಡಿಸಿದ್ದಾರೆ.

"ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಳೆ ರಾಹುಲ್ ಗಾಂಧಿ ಅವರು ಎಲ್ಲಿ ಮತ ಚಲಾಯಿಸುತ್ತಾರೆ ಎಂಬ ಪ್ರಶ್ನೆಗಳಿವೆ. ಯಾವುದೇ ಊಹಾಪೋಹಗಳಿಗೆ ಅವಕಾಶವಿಲ್ಲ. ಅವರು ಪಿಸಿಸಿ ಪ್ರತಿನಿಧಿಗಳಾಗಿರುವ ಸುಮಾರು 40 ಭಾರತ ಯಾತ್ರಿಗಳೊಂದಿಗೆ ಬಳ್ಳಾರಿಯ ಸಂಗನಕಲ್ಲು #BharatJodoYatra ಕ್ಯಾಂಪ್‌ಸೈಟ್‌ನಲ್ಲಿ ಮತದಾನ ಮಾಡಲಿದ್ದಾರೆ" ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

22 ವರ್ಷಗಳ ನಂತರ ನಾಳೆ ನಡೆಯಲಿರುವ ಚುನಾವಣೆಗೆ ಪಕ್ಷದ ಉನ್ನತ ಸ್ಥಾನಕ್ಕೆ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ. ಭಾರತ್ ಜೋಡೋ ಯಾತ್ರೆ ಇದೀಗ ಕರ್ನಾಟಕದಲ್ಲಿದ್ದು, ಶನಿವಾರ 1,000 ಕಿ.ಮೀ ಮೈಲಿಗಲ್ಲನ್ನು ದಾಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News