ಚಿಕ್ಕಬಳ್ಳಾಪುರ | ಸಾರ್ವಜನಿಕವಾಗಿ ಹಾವಿನ ಪ್ರದರ್ಶನ ಆರೋಪ: ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲು

Update: 2022-10-16 17:10 GMT
Photo - PTI

ಚಿಕ್ಕಬಳ್ಳಾಪುರ: ಸಾರ್ವಜನಿಕವಾಗಿ ಹಾವಿನ ಪ್ರದರ್ಶನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಧಾರ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರ ವಿರುದ್ಧ ದೂರು ದಾಖಲಾಗಿದೆ.

ಹಾವಿನ ಅಕ್ರಮ ಸಾಗಣೆ ಮಾಡಿ ಸಾರ್ವಜನಿಕವಾಗಿ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿ ದೌರ್ಜನ್ಯ ತಡೆ (ಎಸ್‌ಪಿಸಿಎ) ಜಿಲ್ಲಾ ಸಮಿತಿ ಸದಸ್ಯ ಸಿ.ಎನ್.ಪೃಥ್ವಿರಾಜ್ ಅವರು ಶನಿವಾರ ಚಿಕ್ಕಬಳ್ಳಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಜಾಲಾರಿ ನರಸಿಂಹಸ್ವಾಮಿ ಬೆಟ್ಟದ ಬಳಿಯ ಈಶಾ ಯೋಗ ಕೇಂದ್ರದಲ್ಲಿ ಅ.9 ಮತ್ತು 10ರಂದು ನಡೆದ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ್ ಅವರು ಕೇರೆ ಹಾವನ್ನು ಅಕ್ರಮವಾಗಿ ಹಿಡಿದು ಪ್ರದರ್ಶಿಸಿದ್ದಾರೆ. ಈ ವೇದಿಕೆಯ ಮುಂಭಾಗದಲ್ಲಿ ಅಪಾರ ಸಂಖ್ಯೆಯ ಜನರು ಸೇರಿದ್ದರು. ವೇದಿಕೆಯಲ್ಲಿ ಕಣ್ಣು ಕೋರೈಸುವ ವಿದ್ಯುತ್ ಇತ್ತು. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ವೇಳಾಪಟ್ಟಿ-2 ರ ಅಡಿಯಲ್ಲಿ ಹಾವು ಪಟ್ಟಿಮಾಡಲಾಗಿದ್ದು, ಇದರಡಿಯಲ್ಲಿ ಎಫ್ಐಆರ್ ದಾಖಲಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News