×
Ad

AICC ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: KPCC ಕಚೇರಿಯಲ್ಲಿ ಮತ ಚಲಾಯಿಸಿದ ಡಿ.ಕೆ.ಶಿವಕುಮಾರ್

Update: 2022-10-17 11:16 IST

ಬೆಂಗಳೂರು, ಅ. 17: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ಮತದಾನ ನಡೆಯುತ್ತಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಕಣದಲ್ಲಿದ್ದಾರೆ. 

ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ನಗರದ  ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿನ ಬೂತ್ ನಂಬರ್ 3ರಲ್ಲಿ ಮತ ಚಲಾಯಿಸಿದರು. ಬಳಿಕ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಕಾಂಗ್ರೆಸ್ ಯಾವಾಗಲೂ ಪ್ರಜಾಪ್ರಭುತ್ವದ ಪರವಾಗಿದೆ. ಇಂದಿನ ಚುನಾವಣೆ ಅದಕ್ಕಿರುವ ಮತ್ತೊಂದು ಉದಾಹರಣೆಯಾಗಿದೆ' ಎಂದು ತಿಳಿಸಿದ್ದಾರೆ. 

ಸಂಗನಕಲ್ಲು ಕ್ಯಾಂಪ್‍ನಲ್ಲಿ ರಾಹುಲ್ ಮತ: ಎಐಸಿಸಿ ನಾಯಕ ರಾಹುಲ್ ಗಾಂಧಿ‘ಭಾರತ್ ಜೋಡೊ ಯಾತ್ರೆ' ಕೈಗೊಂಡಿದ್ದು, ಮತದಾನ ಹಿನ್ನೆಲೆ ಯಾತ್ರೆ ಮೊಟಕುಗೊಳಿಸಲು ಸಾಧ್ಯವಿಲ್ಲ. ಹೀಗಾಗಿ ರಾಹುಲ್‍ ಹಾಗೂ ಅವರೊಂದಿಗೆ ಯಾತ್ರೆಯಲ್ಲಿ ಭಾಗಿಯಾಗಿರುವ 40 ಮಂದಿ ಸದಸ್ಯರಿಗೆ ವಿಶೇಷ ಮತಗಟ್ಟೆ ಸ್ಥಾಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News