×
Ad

ವೆಲ್ಫೇರ್ ಪಾರ್ಟಿಯಿಂದ ರಾಜ್ಯಾದ್ಯಂತ ಜಾಥ: ಅ.20ರಂದು ಉಡುಪಿಗೆ

Update: 2022-10-17 19:05 IST

ಉಡುಪಿ, ಅ.17: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ‘ದೇಶ್ ಮೆ ಬಡಾ ಬವಾಲ್ -ರೋಟಿ, ರೋಜಿ ಕಾ ಸವಾಲ್’ ಎಂಬ ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ಕಾರವಾನ ಹಮ್ಮಿಕೊಳ್ಳಲಾಗಿದ್ದು, ಕಲಬುರುಗಿಯಿಂದ ಹೊರಟ ಈ ಜಾಥವು ಅ.20ರಂದು ಉಡುಪಿಗೆ ಆಗಮಿಸಲಿದೆ ಎಂದು ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಉದ್ಯಾವರ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಮತ್ತು ನಿರುದ್ಯೋಗದಿಂದ ಮುಕ್ತಿ ಹೊಂದಲು ಹಾಗೂ ದೇಶದ ಅರ್ಥವ್ಯವಸ್ಥೆಯನ್ನು ಸುಧಾರಿಸಲು ಸರಕಾರ ಕೈಗೊಳ್ಳಬಹುದಾದ  ಮಾರ್ಗೋ ಪಾಯ ಮತ್ತು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಜಾಥ ನಡೆಯ ಲಿದೆ. ಜಾಥ ಉಡುಪಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಅ.20ರಂದು ಸಂಜೆ 5ಗಂಟೆಗೆ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಕಾರ್ಯಕ್ರಮ ವನ್ನು ಆಯೋಜಿಸ ಲಾಗಿದೆ. ಇದರಲ್ಲಿ ಪಕ್ಷದ ರಾಜ್ಯ ನಾಯಕರು ಭಾಗವಹಿಸಲಿರುವರು. ಅ.21 ರಂದು ಮಂಗಳೂರಿನಲ್ಲಿ ಜಾಥಾದ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದರು.

ದೇಶದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಬಿಕ್ಕಟ್ಟು ನಿಭಾಯಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ತಕ್ಷಣ ಪರಿಹಾರ ಕ್ರಮಗಳನ್ನು ತೆಗೆದು ಕೊಳ್ಳಬೇಕು. ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ತೆ ನೀಡಬೇಕು. ಸಂವಿಧಾನದ ಪರಿಚ್ಚೇದ ೨೧ರ ಅಡಿಯಲ್ಲಿ ಜೀವನೋಪಾಯದ ಹಕ್ಕನ್ನು ಮೂಲಭೂತ ಹಕ್ಕನಾಗಿ ಮಾಡಬೇಕು. ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಯನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.

ಎಲ್ಲಾ ಬಿಪಿಎಲ್ ಕಾರ್ಡ್ ಕುಟುಂಬಗಳಿಗೆ ಉಚಿತ ಸಿಲಿಂಡರ್ ಮತ್ತು ಸಬ್ಸಿಡಿ ರಿಫಿಲ್ ಸಿಲಿಂಡರ್ ನೀಡಬೇಕು. ಬಿಪಿಎಲ್ ಕಾರ್ಡ್‌ದಾರರಿಗೆ ಅನ್ನ ರೋಜ್‌ಗಾರ್ ಯೋಜನೆ ಮುಂದುವರಿಸಬೇಕು. ಮನ್‌ರೇಗಾ ಯೋಜನೆ ಯನ್ನು ನಗರದ ಬಡವರಿಗೂ ವಿಸ್ತರಿಸಬೇಕು ಮತ್ತು ವೇತನವನ್ನು ೫೦೦ರೂ. ಹಾಗೂ ಕೆಲಸದ ದಿನಗಳನ್ನು ೨೦೦ ದಿನಗಳಿಗೆ ಹೆಚ್ಚಿಸಬೇಕು. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚುವರಿ ಶುಲ್ಕವನ್ನು ಹಿಂಪಡೆಯಬೇಕು ಮತ್ತು ಅದನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು. ಕಾಳಸಂತೆ ಮತ್ತು ಭ್ರಷ್ಟಾಚಾರ ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ವಿಜಯ್, ಶಹಜಹಾನ್ ತೋನ್ಸೆ, ಜಿಲ್ಲಾ ಸಮಿತಿಯ ಸದಸ್ಯರಾದ ಅನ್ವರ್ ಅಲಿ ಕಾಪು, ಅಬ್ದುಲ್ ರಜಾಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News