×
Ad

ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟಕ್ಕೆ ರಾಷ್ಟ್ರ ಪ್ರಶಸ್ತಿ

Update: 2022-10-17 19:24 IST

ಉಡುಪಿ, ಅ.17: ಕ್ರೈಸ್ತ ಧರ್ಮಪ್ರಾಂತ್ಯದ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದೆ.

ರಾಷ್ಟ್ರೀಯ ಸ್ತ್ರೀ ಆಯೋಗ, ಅಖಿಲ ಭಾರತೀಯ ಕೆಥೊಲಿಕ್ ಬಿಷಪ್ ಮಂಡಳಿಯು ಲಕ್ನೋದ ನವಿಂತಾ ಧರ್ಮ ಕೇಂದ್ರದಲ್ಲಿ ನಡೆಸಿದ ೪ನೇ ರಾಷ್ಟ್ರ ಮಟ್ಟದ ಮಹಿಳಾ ಸಮ್ಮೇಳನದಲ್ಲಿ ಭಾರತೀಯ ಬಿಷಪ್ ಮಂಡಳಿಯ ಅಧ್ಯಕ್ಷ ಪಾಂಡಿಚೇರಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂ.ರೆ.ಫ್ರಾನ್ಸಿಸ್ ಕಾಲಿಸ್ತ್  ಉಡುಪಿ ಧರ್ಮಪ್ರಾಂತ್ಯದ ಸ್ತೀ ಸಂಘಟನೆಯ ಅಧ್ಯಕ್ಷೆ ಅನಿತಾ ಡಾಯಸ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟ  ಸ್ತ್ರೀ ಸಬಲೀಕರಣ, ಸ್ತ್ರೀಯರ ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಯಲ್ಲಿ ಮುಂಚೂಣಿ ಯಲ್ಲಿದ್ದು ಇದರ ಸಾಧನೆಗೆ ಪ್ರಶಸ್ತಿಯನ್ನು ನೀಡಲಾಗಿದೆ. ಈ ಸಂದರ್ಭ ಸಂಪದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಉಡುಪಿ ಧರ್ಮಪ್ರಾಂತ್ಯ ಹಾಗೂ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ನಿರ್ದೇಶಕ ವಂ.ರೆಜಿನಾಲ್ಡ್ ಪಿಂಟೊ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News