×
Ad

ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ಬಿ.ಎಲ್.ಶಂಕರ್ ರಾಜೀನಾಮೆ

Update: 2022-10-17 19:55 IST
 ಬಿ.ಎಲ್.ಶಂಕರ್

ಬೆಂಗಳೂರು, ಅ.17:ರಾಜ್ಯ ಸರಕಾರದಡಿ ಸ್ಥಾಪಿಸಿರುವ ನಾಡಿನ ಹಿರಿಯ ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನನದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಬಿ.ಎಲ್.ಶಂಕರ್ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಬಿ.ಎಲ್.ಶಂಕರ್ ಅವರು ಪತ್ರ ಬರೆದಿದ್ದು, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಈ ಮೂಲಕ ರಾಜೀನಾಮೆ ಸಲ್ಲಿಸುತ್ತಿದ್ದೇನೆ.ಇಲ್ಲಿಯವರೆಗೆ ತಾವು ಹಾಗೂ ಪ್ರತಿಷ್ಠಾನದ ಇತರ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ನೀಡಿರುವ ಸಕಾಲಿಕ ಸಹಕಾರಕ್ಕೆ ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ. 

ರಾಜ್ಯ ಸರಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖಾಂತರ ನಾಡಿನ ಹೆಸರಾಂತ ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಬದುಕು ಬರಹ ಹಾಗೂ ಅವರ ಪರಿಸರ ಕಾಳಜಿಯನ್ನು ಜನತೆಗೆ ತಲುಪಿಸುವು ನಿಟ್ಟಿನಲ್ಲಿ ಸ್ಥಾಪಿಸಿರುವ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಕಚೇರಿಯೂ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿದೆ.

ಇನ್ನೂ, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿರುವ ಕಾಂಗ್ರೆಸ್ ನಾಯಕ ಬಿ.ಎಲ್.ಶಂಕರ್ ಅವರು 2022ರಲ್ಲಿ ಆಯ್ಕೆಯಾಗಿದ್ದು, ನಾಲ್ಕನೆ ಬಾರಿಗೆ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News