ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ಅಧ್ಯಕ್ಷರಾಗಿ ಜಗನ್ನಾಥ ಶೆಟ್ಟಿ
Update: 2022-10-17 20:08 IST
ಉಡುಪಿ, ಅ.17: ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಪಿ.ಜಗನಾಥ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಬಿ.ಮಧುಸೂದನ ನಾಯಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯವರಾದ ಕೆ.ಎಸ್.ಜಗದೀಶ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆಂದು ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಜಿ.ಸಾಲಿಯಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.