ಅವಧಿ ಮುಕ್ತಾಯದ ಬಳಿಕ ರಾಜಕೀಯ ನಿವೃತ್ತಿ: ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಘೋಷಣೆ

Update: 2022-10-17 15:17 GMT
ವಿ.ಶ್ರೀನಿವಾಸ್ ಪ್ರಸಾದ್ - ಚಾಮರಾಜನಗರ ಸಂಸದರು

ಮೈಸೂರು,ಅ.17: ಹಿರಿಯ ರಾಜರಾಣಿ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.

ನಗರದ ಕಲಾಮಂದರಿದಲ್ಲಿ ಸೋಮವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ''ನನ್ನ ರಾಜಕೀಯ ಜೀವನಕ್ಕೆ 50 ವರ್ಷ ಆಗುತ್ತಿದೆ. ಇನ್ನು ಒಂದೂವರೆ ವರ್ಷಕ್ಕೆ ಸಂಸದ ಅವಧಿಯೂ ಮುಕ್ತಾಯವಾಗುತ್ತದೆ. ಅಲ್ಲಿಗೆ ನಾನು ನಿವೃತ್ತಿ ಆಗುತ್ತೇನೆ. 1977 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದೆ. ಇದೂವರೆಗೆ 14 ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 11 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ಒಂದೂವರೆ ವರ್ಷ ಕಳೆದರೆ ನಾನು ರಾಜಕೀಯಕ್ಕೆ ಬಂದು 50 ವರ್ಷವಾಗಲಿದೆ. ಹಾಗಾಗಿ ರಾಜಕೀಯವಾಗಿ ನಿವೃತ್ತಿಯಾಗಲು ನಿರ್ಧರಿಸಿದ್ದೇನೆ'' ಎಂದು ಸ್ಪಷ್ಟಪಡಿಸಿದರು.

''ಕಳೆದ ಲೋಕಸಭಾ ಚುನಾವಣೆಲ್ಲೇ ಸ್ಪರ್ಧಿಸುವ ಇಚ್ಛೆ ಇರಲಿಲ್ಲ. ಆದರೆ ಕ್ಷೇತ್ರದ ಮತದಾರರು ಕಡೆಯಿ ಚುನಾವಣೆಯಲ್ಲಿ ಗೆದ್ದು ಅವಧಿ ಮುಗಿದ ಬಳಿಕ ನಿವೃತ್ತಿಯಾಗಿ ಎಂದಿದ್ದರು. ಹಾಗಾಗಿ ಚುನಾವಣೆಗೆ ಸ್ಪರ್ಧಿಸಿದೆ. ಈಗ ನನ್ನ ಆರೋಗ್ಯ ಸರಿಯಿಲ್ಲ. ನನಗೀಗ ಹೆಚ್ಚು ಸಮಯ ನಿಲ್ಲಲಾಗುವುದಿಲ್ಲ. ಹಾಗಾಗಿ ನನ್ನ ಸಂಸತ್ ಸ್ಥಾನದ ಅವಧಿ ಮುಗಿದ ನಂತರ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದೇನೆ. ನನ್ನ ರಾಜಕೀಯ ನಿವೃತ್ತಿ ಬಳಿಕ ನನ್ನ ಮಕ್ಕಳು ರಾಜಕಾರಣಕ್ಕೆ ಬರುವುದಿಲ್ಲ'' ಎಂದು ಹೇಳಿದರು.

ಇದನ್ನೂ ಓದಿ: ರಜಪೂತರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಸಿ.ಟಿ. ರವಿ ವಿರುದ್ಧ ಪ್ರತಿಭಟನೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News