ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ಆರಂಭ

Update: 2022-10-18 04:51 GMT

ಸುರತ್ಕಲ್, ಅ.18: ಸುರತ್ಕಲ್ ಟೋಲ್ ಗೇಟ್ ಅಕ್ರಮವಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನಮನಸ್ಕರು ಇಂದು ಬೆಳಗ್ಗೆ ಪ್ರತಿಭಟನಾ ಧರಣಿ ಆರಂಭಿಸಿದ್ದಾರೆ.

ಟೋಲ್ ಗೇಟ್ ಗಿಂತ ಸುಮಾರು 50 ಮೀಟರ್ ದೂರದಲ್ಲಿ ಎದುರು ಜಮಾಯಿಸಿರುವ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಸಂಸದ, ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಮಾಜಿ ಶಾಸಕರಾದ ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಪ್ರಮುಖರಾದ ಮಿಥುನ್ ರೈ, ಶಶಿಧರ್ ಹೆಗ್ಡೆ, ಪ್ರತಿಭಾ ಕುಳಾಯಿ, ಬಿ.ಕೆ.ಇಮ್ತಿಯಾಝ್ ಮೊದಲಾದವರು ಹೋರಾಟಕ್ಕೆ ನೇತೃತ್ವ ನೀಡಿದ್ದಾರೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಬ್ಯಾರಿಕೇಡ್ ಗಳನ್ನು ಬಳಸಿ ಟೋಲ್ ಗೇಟ್ ಗಿಂತ ಸುಮಾರು 50 ಮೀಟರ್ ದೂರದಲ್ಲೇ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ 'ಬೆದರಿಕೆ' ಪ್ರಕರಣ: ತನಿಖೆ ಸಿಐಡಿಗೆ ಒಪ್ಪಿಸಿದ ಸರಕಾರ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News