×
Ad

ಕೇದಾರನಾಥ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ, ಆರು ಮಂದಿ ಮೃತ್ಯು

Update: 2022-10-18 12:24 IST
Photo: Twitter/@ANI

ಡೆಹ್ರಾಡೂನ್: ಇಂದು ಉತ್ತರಾಖಂಡದಲ್ಲಿ ಕೇದಾರನಾಥ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡದ ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಕೇದಾರನಾಥದಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಈ ಘಟನೆ ನಡೆದಿದೆ

ಹವಾಮಾನ ವೈಪರೀತ್ಯದಿಂದ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಹಾಗೂ ಪೊಲೀಸರು ಧಾವಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News