ಬೆಂಗಳೂರು | ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ: ಯುವತಿ ಸ್ಥಳದಲ್ಲೇ ಮೃತ್ಯು, ಯುವಕನ ಕೈಗೆ ಗಂಭೀರ ಗಾಯ

Update: 2022-10-18 12:47 GMT

ಬೆಂಗಳೂರು, ಅ.18:  ಬೈಕ್ ಒಂದು ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಯುವತಿ ಮೃತಪಟ್ಟರೆ, ಸವಾರನ ಕೈ ತುಂಡಾಗಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವತಿಯನ್ನು ಆರ್‍ಟಿ ನಗರದ ನಿವಾಸಿ ಸನಾ ಸಾಹೀಬಾ (18) ಎಂದು ಗುರುತಿಸಲಾಗಿದ್ದು, ಬೈಕ್ ಸವಾರ ಝಿಶಾನ್ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಇಬ್ಬರೂ ಆರ್ ಟಿನಗರದ ನಿವಾಸಿಗಳಾಗಿದ್ದು, ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಝಿಶಾನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗೆಳತಿ ಸನಾ ಸಾಹೀಬಾಯನ್ನು ಬೈಕಿನ ಹಿಂಬದಿಯಲ್ಲಿ ಕೂರಿಸಿಕೊಂಡು ದೇವನಹಳ್ಳಿ ಕಡೆ ಹೋಗುತ್ತಿದ್ದಾಗ, ಜಕ್ಕೂರು ಮೇಲ್ಸೇತುವೆ ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದ್ದಾನೆನ್ನಲಾಗಿದೆ.

ಅಪಘಾತದ ರಭಸಕ್ಕೆ ಯುವತಿ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದು, ಝಿಶಾನ್ ಬಲಗೈ ತುಂಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಯಲಹಂಕ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News