×
Ad

ಚಾಮರಾಜನಗರ: ಟ್ರ್ಯಾಕ್ಟರ್ ಉರುಳಿ ಬಿದ್ದು ಯುವಕ ಸ್ಥಳದಲ್ಲೇ ಮೃತ್ಯು

Update: 2022-10-18 18:37 IST
ಉರುಳಿ ಬಿದ್ದಿರುವ ಟ್ರ್ಯಾಕ್ಟರ್ | ಶಿವಕುಮಾರ್ - ಮೃತ ಯುವಕ 

ಚಾಮರಾಜನಗರ: ಜಮೀನಿನಲ್ಲಿ ಟ್ಯ್ರಾಕ್ಟರ್ ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಯುವಕನೋರ್ವ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ವರದಿಯಾಗಿದೆ.

ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಶಾಂತಪ್ಪ ಎಂಬವರ ಪುತ್ರ ಶಿವಕುಮಾರ್ (32) ಮೃತ ಯುವಕ ಎಂದು ತಿಳಿದು ಬಂದಿದೆ.  ಈತ ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ನಲ್ಲಿ ಉಳುಮೆ ಮಾಡುವಾಗ ಆಯತಪ್ಪಿ ಟ್ರ್ಯಾಕ್ಟರ್ ಉರುಳಿಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆನ್ನಲಾಗಿದೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News