×
Ad

ಬಿಲ್ಕಿಸ್‌ ಬಾನು ಅತ್ಯಾಚಾರಿಗಳ ಬಿಡುಗಡೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

Update: 2022-10-18 19:03 IST
Photo: RahulGandhi/twitter

ಹೊಸದಿಲ್ಲಿ: ಗುಜರಾತ್ ಗಲಭೆ ವೇಳೆ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ನಡೆಸಿ, ಆಕೆಯ ಪುಟ್ಟ ಮಕ್ಕಳು ಸೇರಿದಂತೆ ಕುಟುಂಬದ ಏಳು ಮಂದಿಯನ್ನು ಭೀಕರವಾಗಿ ಕೊಂದಿದ್ದ 11 ಮಂದಿ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸಿದ ಗುಜರಾತ್ ಹಾಗೂ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

"ಕೆಂಪುಕೋಟೆಯಲ್ಲಿ, ಮಹಿಳೆಯರನ್ನು ಗೌರವಿಸುವ ಬಗ್ಗೆ ಮಾತನಾಡುತ್ತಾರೆ, ವಾಸ್ತವದಲ್ಲಿ ಅತ್ಯಾಚಾರಿಗಳ ಜತೆ ನಿಲ್ಲುತ್ತಾರೆ. ಪ್ರಧಾನಿ ಅವರ ಭರವಸೆ ಮತ್ತು ಉದ್ದೇಶಗಳ ನಡುವಿನ ವ್ಯತ್ಯಾಸ ಸ್ಪಷ್ಟವಾಗಿದೆ. ಅವರು ಮಹಿಳೆಯರಿಗೆ ಮೋಸ ಮಾಡಿದ್ದಾರೆ” ಎಂದು ರಾಹುಲ್‌ ಗಾಂಧಿ ಕಿಡಿ ಕಾರಿದ್ದಾರೆ.

ಬಿಲ್ಕಿಸ್‌ ಬಾನು ರ ಅತ್ಯಚಾರಿಗಳ ಬಿಡುಗಡೆಯನ್ನು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ ಬಿಜೆಪಿಯ ಹಲವು ನಾಯಕರು ಸಮರ್ಥಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News