×
Ad

ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಹೋರಾಟ: ಪೊಲೀಸ್ ದೌರ್ಜನ್ಯಕ್ಕೆ ಖಂಡನೆ

Update: 2022-10-18 19:30 IST

ಉಡುಪಿ, ಅ.18: ಸುರತ್ಕಲ್ ಟೋಲ್‌ಗೇಟ್ ತೆರವುಗೊಳಿಸುವಂತೆ ಮತ್ತು ತಕ್ಷಣದಿಂದಲೇ ಟೋಲ್ ಸಂಗ್ರಹ ನಿಲ್ಲಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟಗಾರರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸುತ್ತಿರುವ ರಾಜ್ಯ ಸರಕಾರದ ದುರ್ನಡೆಯನ್ನು ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ಈ ಕೂಡಲೇ ಬಂಧಿಸಿರುವ ಎಲ್ಲ ನಾಗರಿಕರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.

ಒಪ್ಪಂದವನ್ನು ಉಲ್ಲಂಘಿಸಿ ಸಾರ್ವಜನಿಕರಿಂದ ದಬ್ಬಾಳಿಕೆಯ ಮೂಲಕ ಟೋಲ್ ವಸೂಲಿ ಮಾಡುತ್ತಿರುವ ಲೂಟಿಯನ್ನು ತಡೆಯುವ ಬದಲು, ಲೂಟಿ ಯನ್ನು ತಡೆಯಲು ಯತ್ನಿಸಿದ ಸಾರ್ವಜನಿಕರ ಮೇಲೆ ಪೊಲೀಸ್ ದಬ್ಬಾಳಿಕೆಗೆ ಕ್ರಮವಹಿಸಿರುವ ಸರಕಾರದ ನಡೆಯು ನಾಚಿಕೆಗೇಡಿನದಾಗಿದ್ದು, ಅಕ್ಷಮ್ಯವಾಗಿದೆ ಮತ್ತು ಇದು ಸ್ಪಷ್ಟವಾಗಿ ಲೂಟಿಕೋರ ಕಂಪನಿಯ ಜೊತೆಗಿನ ಸರಕಾರದ ಶಾಮೀಲಾತಿಯನ್ನು ಎತ್ತಿ ತೋರಿಸುತ್ತಿದೆಯೆಂದು ಸಿಪಿಐಎಂ ಜಿಲ್ಲಾ ಕಾರ್ಯ ದರ್ಶಿ ಬಾಲಕೃಷ್ಣ ಶೆಟ್ಟಿ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News