ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2022-10-18 20:47 IST
ಮಲ್ಪೆ, ಅ.18: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕಲ್ಮಾಡಿ ಬೊಟ್ಟಲ ನಿವಾಸಿ ಪ್ರಶಾಂತ್(32) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.17 ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿ: ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದ ಶಿವಪುರ ಗ್ರಾಮದ ಮುಳ್ಳು ಗುಡ್ಡೆ ಕಾಳಾಯಿ ನಿವಾಸಿ ನಾರಾಯಣ ಶೆಟ್ಟಿಗಾರ್ (73) ಎಂಬವರು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಅ.17ರಂದು ಬೆಳಗ್ಗೆ ಮನೆ ಸಮೀಪದ ರಬ್ಬರ್ ತೋಟದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.