ಏಶ್ಯಕಪ್ ಗಾಗಿ ಪಾಕ್ ಗೆ ಭಾರತ ಹೋಗುವುದಿಲ್ಲ ಎಂದಿರುವ ಜಯ್ ಶಾ ವಿರುದ್ಧ ಅಫ್ರಿದಿ ವಾಗ್ದಾಳಿ

Update: 2022-10-19 08:16 GMT

ಮುಂಬೈ: ಮುಂದಿನ ವರ್ಷ ಏಶ್ಯಕಪ್ ನಲ್ಲಿ ಭಾಗವಹಿಸಲು ಭಾರತವು ಪಾಕಿಸ್ತಾನಕ್ಕೆ ತೆರಳಲಾರದು. ಬದಲಾಗಿ ಟೂರ್ನಿ ತಟಸ್ಥ ಸ್ಥಳದಲ್ಲಿ ಆಯೋಜನೆಯಾಗಲಿದೆ ಎಂಬ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ Jay Sha ಹೇಳಿಕೆಯನ್ನು ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ Shahid Afridi  ತೀವ್ರವಾಗಿ ಖಂಡಿಸಿದ್ದಾರೆ. ಭಾರತದಲ್ಲಿ ಆಡಳಿತ ಅನುಭವದ ಕೊರತೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಳೆದೊಂದು ವರ್ಷದಲ್ಲಿ ಉಭಯ ತಂಡಗಳ ಮಧ್ಯೆ ಉತ್ತಮ ಒಡನಾಟ ಕಂಡುಬಂದಿದೆ. ಇದರಿಂದ ಉಭಯ ದೇಶಗಳ ನಡುವೆ ಉತ್ತಮ ಭಾವನೆ ಉಂಟಾಗಿದೆ. ಹೀಗಿರುವಾಗ ಬಿಸಿಸಿಐ ಕಾರ್ಯದರ್ಶಿ ಟ್ವೆಂಟಿ-20 ವಿಶ್ವಕಪ್ ವೇಳೆ ಇಂತಹ ಹೇಳಿಕೆ ಏಕೆ ನೀಡುತ್ತಾರೆ? ಇದು ಭಾರತದಲ್ಲಿಕ್ರಿಕೆಟ್ ಆಡಳಿತ ಅನುಭವದ ಕೊರತೆಯನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.

2023ರ ಏಶ್ಯಕಪ್ ಗೆ ಪಾಕಿಸ್ತಾನ ಆತಿಥ್ಯ ವಹಿಸಲಿದೆ. ಆದರೆ ಪಾಕ್ ನಲ್ಲಿ ಭಾರತ ಆಡುವುದಿಲ್ಲ ಎಂದು ಏಶ್ಯ ಕ್ರಿಕೆಟ್ ಕೌನ್ಸಿಲ್(ಎಸಿಸಿ)ಅಧ್ಯಕ್ಷರೂ ಆಗಿರುವ ಜಯ್ ಶಾ ಮಂಗಳವಾರ ಹೇಳಿಕೆ ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಪಾಕಿಸ್ತಾನವು ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ 50 ಓವರ್ ಗಳ ವಿಶ್ವಕಪ್ ನಿಂದ ಹಿಂದೆ ಸರಿಯುವ ಬೆದರಿಕೆ ಹಾಕಿದೆ. ಇದರಿಂದ ಎರಡೂ ದೇಶಗಳ ಮಂಡಳಿಗಳ ನಡುವೆ ಸಂಘರ್ಷ ಏರ್ಪಟ್ಟಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News