×
Ad

ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

Update: 2022-10-19 13:53 IST
Photo:ANI

ಹೊಸದಿಲ್ಲಿ: ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ  ಅವರು ಕಾಂಗ್ರೆಸ್ ನ ನೂತನ  ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

 ಎರಡು ದಶಕಗಳ ಬಳಿಕ ಗಾಂಧಿಯೇತರ ನಾಯಕನಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಒಲಿದಿದೆ.

ಅ.17ರಂದು ನಡೆದಿರುವ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಇಂದು ನಡೆದಿದೆ.

ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ,  ಪ್ರತಿಸ್ಪರ್ಧಿ  ಶಶಿ ತರೂರ್ 1,072 ಮತಗಳನ್ನು ಪಡೆದಿದ್ದಾರೆ.

ನೂತನ ಅಧ್ಯಕ್ಷ   ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಶಿ ತರೂರ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ವರೆಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಆರು ಬಾರಿ ಚುನಾವಣೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News