×
Ad

ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಶಶಿ ತರೂರ್ ಅಭಿನಂದನೆ

Update: 2022-10-19 15:11 IST
photo: pti

ಹೊಸದಿಲ್ಲಿ: ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಆಯ್ಕೆಯಾಗಿದ್ದಾರೆ.

ಚುನಾವಣಾ ಫಲಿತಾಂಶದ ಕುರಿತು ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ ಹಿರಿಯ ನಾಯಕ, ಪರಾಜಿತ ಅಭ್ಯರ್ಥಿ ಶಶಿ ತರೂರ್: "ಎಐಸಿಸಿ ಅಧ್ಯಕ್ಷರಾಗಿರುವುದು ಮಹಾ ಗೌರವ ಹಾಗೂ  ದೊಡ್ಡ ಜವಾಬ್ದಾರಿ.  ಆ ಕಾರ್ಯದಲ್ಲಿ ಖರ್ಗೆಜಿಯವರು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ. ಭಾರತದಾದ್ಯಂತ ಒಂದು ಸಾವಿರಕ್ಕೂ ಹೆಚ್ಚು ಸಹೋದ್ಯೋಗಿಗಳು, ಕಾಂಗ್ರೆಸ್‌ನ ಅನೇಕ ಹಿತೈಷಿಗಳ ಬೆಂಬಲವನ್ನು ಪಡೆದಿರುವುದು ನನ್ನ ಸೌಭಾಗ್ಯ ಎಂದು ಟ್ವೀಟಿಸಿದ್ದಾರೆ.

ಖರ್ಗೆ 7,897 ಮತಗಳನ್ನು ಪಡೆದರೆ, ತರೂರ್ 1,072 ಮತಗಳನ್ನು ಪಡೆದರು.

"ಚುನಾವಣಾ ಫಲಿತಾಂಶ ಪ್ರಕಟವಾದ ಕೂಡಲೇ ತರೂರ್ ಅವರು ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದಿಸಿದರು. ನಂತರ ಅವರು ಟ್ವೀಟ್ ಮಾಡಿದ್ದಾರೆ: "ನಮ್ಮ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಲು ಹಾಗೂ  ಅವರಿಗೆ ನನ್ನ ಸಂಪೂರ್ಣ ಸಹಕಾರವನ್ನು ನೀಡಲು ಆಗಮಿಸಿದ್ದೇನೆ. ಕಾಂಗ್ರೆಸ್ ಚುನಾವಣೆಯಲ್ಲಿನ  ಗೆಲುವಿಗಾಗಿ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ " ಎಂದು ಹೇಳಿದ್ದಾರೆ.

 ಖರ್ಗೆ ಅವರು 24 ವರ್ಷಗಳಲ್ಲಿ ಮೊದಲ ಗಾಂಧಿಯೇತರ ಕಾಂಗ್ರೆಸ್ ಮುಖ್ಯಸ್ಥರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News