×
Ad

ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಜೆ.ಆರ್. ಲೋಬೊ, ಐವನ್ ಡಿಸೋಜಾ ಅಭಿನಂದನೆ

Update: 2022-10-19 17:28 IST
ಮಲ್ಲಿಕಾರ್ಜುನ ಖರ್ಗೆ

ಮಂಗಳೂರು: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಖರ್ಗೆಯವರನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೊ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜಾ ಅಭಿನಂದಿಸಿದ್ದಾರೆ.

ದೇಶದ ಓರ್ವ ಹಿರಿಯ ಕಾಂಗ್ರೆಸಿಗರಾದ ಅವರು ಪಕ್ಷಕ್ಕೆ ಸಲ್ಲಿಸಿದ ಸೇವೆ ಅಪಾರ. ಸುದೀರ್ಘ ಅವಧಿಗೆ ರಾಜ್ಯದಲ್ಲಿ ಸಚಿವರಾಗಿ, ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಾಗಿ ಸೇವೆ ಸಲ್ಲಿಸಿದ ಅನುಭವ ಅವರಿಗಿದೆ. ಅವರ ಅಧಿಕಾರ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಉತ್ತುಂಗಕ್ಕೇರಲಿ ಎಂದು ಜೆ.ಆರ್. ಲೋಬೋ ಶುಭ ಹಾರೈಸಿದ್ದಾರೆ.

ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪಕ್ಷದ ಹಿರಿಯ ನಾಯಕರು ಹಾಗೂ ರಾಜ್ಯಸಭಾ ಸದಸ್ಯರಾಗಿದ್ದು, ಹೆಮ್ಮೆಯ ಕನ್ನಡಿಗ. ಅವರ ಅಧಿಕಾರವಧಿಯಲ್ಲಿ ಕಾಂಗ್ರೆಸ್ ಪಕ್ಷ ರಾಷ್ಟ್ರಾದ್ಯಂತ ಬಲಿಷ್ಟವಾಗಲಿ ಎಂದು ಐವನ್ ಡಿಸೋಜಾ ಶುಭ ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News