ಖರ್ಗೆಗೆ ಮುಳುಗುವ ಹಡಗಿನ ಸ್ಟೇರಿಂಗ್ ಕೊಟ್ಟಿದ್ದಾರೆ: ಸಿಎಂ ಬೊಮ್ಮಾಯಿ

Update: 2022-10-19 13:39 GMT

ಕಲಬುರಗಿ : 'ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಧ್ಯಕ್ಷ ಸ್ಥಾನ ಕೊಟ್ಟಿದ್ದರೆ ಅದನ್ನು ನಾವು ಸ್ವಾಗತ ಮಾಡುತ್ತಿದ್ದೆವು, ಈಗ ಮುಳುಗುವ ಹಡಗಿನ ಸ್ಟೇರಿಂಗ್ ಅವರ ಕೈಗೆ ಕೊಟ್ಟಿದ್ದಾರೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಹಗಾಂವ್ ಕ್ರಾಸ್​​ನಲ್ಲಿ ನಡೆಯುತ್ತಿರೋ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ''ಮಲ್ಲಿಕಾರ್ಜುನ ಖರ್ಗೆ ಅವರು ಬಹಳ ಹಿರಿಯರಿದ್ದಾರೆ. ಅವರ ಬಗ್ಗೆ ನನಗೆ ಅಪಾರ ಗೌರವ ಇದೆ. 371 (ಜೆ) ಕಲಂ ಸಂವಿಧಾನ ತಿದ್ದುಪಡಿ ಮಾಡಿಸಲು ಅವರ ಪಾತ್ರ ದೊಡ್ಡದು. ಆದರೆ,  ಅವರಿಗೆ ಕಾಂಗ್ರೆಸ್ ಪಕ್ಷ ಮುಳುಗುವಂತ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನ ಕೊಟ್ಟಿರುವುದನ್ನು ಕರ್ನಾಟಕದ ಜನರು ಒಪ್ಪಿಕೊಳ್ಳಲು ಸಾಧ್ಯ ಇಲ್ಲ'' ಎಂದು ಆಕ್ರೋಶ ವ್ಯಕ್ತಪಡಿಸಿದರು. 

''ಯುದ್ಧ ಒಂದು ಕಡೆ ನಡೆಯುತ್ತಿದ್ದರೆ, ಮತ್ತೊಂದು ಕಡೆ ರಾಹುಲ್ ಗಾಂಧಿ ಪಾದಯಾತ್ರೆ ಮಾಡ್ತಿದ್ದಾರೆ'' ಎಂದು ಸಿಎಂ ಬೊಮ್ಮಾಯಿ ವ್ಯಂಗ್ಯವಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News