ಕನಿಷ್ಠ ವಿದ್ಯಾರ್ಥಿಗಳು ಇಲ್ಲದಿದ್ದರೆ, ಕೋರ್ಸ್‍ಗಳನ್ನು ಮುಚ್ಚುವಂತೆ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ

Update: 2022-10-19 14:40 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಅ. 19: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಕನಿಷ್ಠ 15 ವಿದ್ಯಾರ್ಥಿಗಳು ಇಲ್ಲದಿದ್ದರೆ, ಅಂತಹ ಕೋರ್ಸ್‍ಗಳನ್ನು ಮುಚ್ಚುವುದಾಗಿ ಕಾಲೇಜು ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ.

ರಾಜ್ಯದ ಸರಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಸ್ತುತ ಲಭ್ಯವಿರುವ ಕೋರ್ಸ್‍ಗಳಲ್ಲಿ 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದರೆ, ಅವರಿಗೆ ಕಾಲೇಜಿನಲ್ಲಿ ಲಭ್ಯವಿರುವ ಕೋರ್ಸ್‍ಗೆ ಪ್ರವೇಶಾತಿಯನ್ನು ನೀಡಬೇಕು. ಇಲ್ಲವೇ ಬೇರೆ ವಿದ್ಯಾರ್ಥಿಗಳು ಆ ಕೋರ್ಸ್‍ಗೆ ಪ್ರವೇಶ ಪಡೆಯುವಂತೆ ಆಡಳಿತ ಮಂಡಳಿಯು ತಿಳಿಸಬೇಕು. 

ಸಂಗೀತ, ಭೂ ವಿಜ್ಞಾನ, ಎಲೆಕ್ಟ್ರಾನಿಕ್ಸ್, ಸಂಖ್ಯಾಶಾಸ್ತ್ರ, ಮಹಿಳಾ ಅಧ್ಯಯನ, ಪತ್ರಿಕೋದ್ಯಮ ವಿಷಯಗಳಿಗೆ ಕನಿಷ್ಟ 10 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೂ, ಆ ಕೋರ್ಸ್‍ಗಳನ್ನು ಮುಂದುವರಿಸಬಹುದಾಗಿದೆ. ಐಚ್ಛಿಕ ಕನ್ನಡ ವಿಷಯದಲ್ಲಿ ಕನಿಷ್ಟ ವಿದ್ಯಾರ್ಥಿಗಳ ಸಂಖ್ಯೆಯನ್ನು 5ಕ್ಕೆ ಮತ್ತು ಓಪೆನ್ ಎಲೆಕ್ಟೀವ್ ವಿಷಯಗಳಲ್ಲಿ ಕನಿಷ್ಟ ವಿದ್ಯಾರ್ಥಿಗಳ ಸಂಖ್ಯೆಯನ್ನು 15ಕ್ಕೆ ಇಳಿಸಲಾಗಿದೆ ಎಂದು ಸುತ್ತೋಲೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News