ಉಡುಪಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ
Update: 2022-10-19 20:21 IST
ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಚೇರಿ ಹಾಗೂ ಮಲ್ಪೆ ಆಂಗ್ಲ ಶ್ರೀನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯ ದಲ್ಲಿ ಉಡುಪಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಇಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಶುಭಹಾರೈಸಿದರು. ನಗರಸಭೆ ಅಧ್ಯಕ್ಷೆ ಸಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಮಲ್ಪೆ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಘುರಾಮ್ ಸುವರ್ಣ, ಕಾರ್ಯದರ್ಶಿ ಎಂ.ಲಕ್ಷ್ಮೀಶ ಬಂಗೇರ ಮೊದಲಾದ ವರು ಉಪಸ್ಥಿತರಿದ್ದರು.