ಅ.22ರಂದು ಬ್ರಹ್ಮಾವರ ಕೆವಿಕೆಯಲ್ಲಿ ಕೃಷಿ ಮಹೋತ್ಸವ
ಉಡುಪಿ, ಅ.19: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಗೇರು ಮತ್ತು ಕೋಕೊ ಅಭಿವೃದ್ಧಿ ನಿರ್ದೇಶನಾಲಯ ಕೊಚ್ಚಿನ್, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಜಿಪಂ ಉಡುಪಿ, ಮುಖ್ಯಮಂತ್ರಿಗಳ ನೈಸರ್ಗಿಕ ಕೃಷಿ ಯೋಜನೆ, ವ.ಕೃ.ತೋ.ಸಂ. ಕೇಂದ್ರ ಬ್ರಹ್ಮಾವರ, ಜಿಲ್ಲಾ ಕೃಷಿಕ ಸಮಾಜ, ಉಡುಪಿ ಮತ್ತು ದಕ್ಷಿಣ ಕನ್ನಡ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಸಂಯುಕ್ತ ಆಶ್ರಯದಲ್ಲಿ ಕೃಷಿ ಮಹೋತ್ಸವ -೨೦೨೨ ಅ.೨೨ ರಂದು ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.
ಉಡುಪಿ ಪತ್ರಿಕಾಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ರಹ್ಮಾವರ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಲಕ್ಷ್ಮಣ ಮಾತನಾಡಿ, ಅಂದು ಬೆಳಗ್ಗೆ ೧೦ ಗಂಟೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿರುವರು. ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿರುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಚಿವ ರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು.
ವಿವಿಯ ಕುಲಪತಿ ಡಾ.ಆರ್.ಸಿ.ಜಗದೀಶ್ ಜೈವಿಕ ಗೊಬ್ಬರಗಳ ಬಿಡುಗಡೆಗೊಳಿಸಲಿದ್ದಾರೆ. ಸಂಶೋಧನಾ ನಿರ್ದೇಶಕ ಡಾ.ಮೃತ್ಯುಂಜಯ ಸಿ. ವಾಲಿ, ವಿಸ್ತರಣಾ ನಿರ್ದೇಶಕ ಡಾ.ಬಿ.ಹೇಮ್ಲಾ ನಾಯ್ಕ್ ತಾಂತ್ರಿಕ ಬಿಡುಗಡೆ ಗೊಳಿಸಲಿದ್ದಾರೆ. ಶಿಕ್ಷಣ ನಿರ್ದೇಶಕ ಡಾ.ಎಂ.ಹನುಮಂತಪ್ಪ ಕೃಷಿ ಡಿಪ್ಲೋಮಾ ಪ್ರಮಾಣ ಪತ್ರ ಬಿಡುಗಡೆ ಗೊಳಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಕೃಷಿಮೇಳದಲ್ಲಿ ಸುಮಾರು 100 ಕ್ಕೂ ಅಧಿಕ ಮಳಿಗೆಗಳಲ್ಲಿ ವಿವಿಧ ಇಲಾಖೆ, ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಿಂದ ಅಭಿವೃದ್ಧಿ ಪಡಿಸಿರುವ ಕೃಷಿ ತಂತ್ರಜ್ಞಾನಗಳ ಮತ್ತು ಕೃಷಿ ಪರಿಕರಗಳ ವಸುತಿ ಪ್ರದರ್ಶನಗಳನ್ನು ಸಹ ನೋಡಬಹುದು ವಿವಿಧ ಭತ್ತದ ತಳಿಗಳು ಮತ್ತು ಬೀಜೋತ್ಪಾದನೆ, ಸಿಓ-೪ ಮೇವಿನ ಹುಲ್ಲಿನ ಪ್ರಾತ್ಯಕ್ಷಿಕೆ, ತೆಂಗಿನಲ್ಲಿ ಬಹುಬೆಳೆ ಯೋಜನೆ ಮತ್ತು ಪೋಷಕಾಂಶಗಳ ನಿರ್ವಹಣೆ, ಗೇರು ಕಸಿ ಕಟ್ಟುವಿಕೆ ಮತ್ತು ತೋಟದಲ್ಲಿ ನೀರು ಹಾಗೂ ಮಣ್ಣು ಸಂರಕ್ಷಣೆ, ಸಾವಯವ ಗೊಬ್ಬರ, ಕಾಂಪೋಸ್ಟ್, ಎರೆ ಗೊಬ್ಬರ ಮತ್ತು ಅಜೋಲ್ಲಾ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆ, ಹೈನುಗಾರಿಕೆ, ಮೀನುಗಾರಿಕೆ, ಆಡು, ಕೋಳಿ ಮತುತಿ ಬಾತುಕೋಳಿ ಸಾಕಾಣಿಕೆ ಪ್ರಾತ್ಯಕ್ಷಿಕೆ, ಜೈವಿಕ ಅನಿಲ ಉತ್ಪಾದನಾ ಘಟಕಗಳು ಸಹಿತ ವಿವಿಧ ವಸ್ತು ಪ್ರದರ್ಶನ ನಡೆಯಲಿದೆ ಎಂದರು.
ಗೇರು ಮತ್ತು ಕೋಕೋ ಬೆಳೆಗಳ ವೈಜ್ಞಾನಿಕ ಕೃಷಿಯ ತರಬೇತಿ ಕಾರ್ಯಕ್ರಮ ಹಾಗೂ ರೈತ-ವಿಜ್ಞಾನಿಗಳ ಕೃಷಿ ತಾಂತ್ರಿಕ ವಿಚಾರ ಮತುತಿ ಚರ್ಚೆ ಭತತಿಘಿ, ಅಡಿಕೆ, ತೆಂಗು, ತರಕಾರಿ ಹಾಗೂ ಇತರ ಬೆಳೆಗಳ ಕುರಿತು ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ಕೆ.ವಿ.ಕೆ. ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ.ಧನಂಜಯ ಬಿ., ಬ್ರಹ್ಮಾವರ ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಕೆ.ವಿ.ಸುಧೀರ್ ಕಾಮತ್ ಉಪಸ್ಥಿತರಿದ್ದರು.