×
Ad

ಸಂಪಾಜೆ: ಕಡವೆ ಬೇಟೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Update: 2022-10-19 22:29 IST

ಸಂಪಾಜೆ: ಕಡವೆಯನ್ನು ಕೊಂದು ಮಾಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಂಪಾಜೆ ವಲಯಾರಣ್ಯದ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.

ದಬ್ಬಡ್ಕ ಗ್ರಾಮ ನಿವಾಸಿಗಳಾದ ಕೃಷ್ಣಪ್ಪ (47), ಪುರುಷೋತ್ತಮ ಕೆ.ಎಸ್.(48) ಬಂಧಿತ ಆರೋಪಿಗಳು.

ಬಂಧಿತರಿಂದ 100 ಕೆ.ಜಿ ಕಡವೆ ಮಾಂಸ, ಮತ್ತಿತ್ತರ ವಸ್ತುಗಳ ವಶ ಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯಿದೆ ಅಡಿ ಪ್ರಕರಣ ದಾಖಲು ಮಾಡಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಹಾಗೂ ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಎಂ.ಕೆ. ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ರಕ್ಷಕರಾದ ಕಾರ್ತಿಕ್, ಅರಣ್ಯ ವೀಕ್ಷಕರಾದ ಕೂಸಪ್ಪ, ಮನೋಜ್ ಕುಮಾರ್, ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News