×
Ad

ನಿಷೇಧಿತ ಪಿಎಫ್‌ಐ ಸಂಘಟನೆಯ ಬಂಧಿತ ಮುಖಂಡರ ಬಗ್ಗೆ ಪೊಲೀಸರಿಂದ ಮಾಹಿತಿ ಸಂಗ್ರಹ

Update: 2022-10-19 22:31 IST
ಫೈಲ್‌ ಫೋಟೊ

ಮಂಗಳೂರು, ಅ.19: ನಿಷೇಧಿತ ಪಿಎಫ್‌ಐ ಸಂಘಟನೆಯ ಬಂಧಿತ ಮುಖಂಡರ ಬಗ್ಗೆ ಬೆಂಗಳೂರು ಪೊಲೀಸರು ದ.ಕ.ಜಿಲ್ಲೆಗೆ ಆಗಮಿಸಿ ಮತ್ತಷ್ಟು ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಡಿ.ಜೆ.ಹಳ್ಳಿ ಮಾದರಿಯಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಆರೋಪದಲ್ಲಿ ಮಂಗಳೂರು ಸಹಿತ ದ.ಕ.ಜಿಲ್ಲೆಯ ವಿವಿಧ ಕಡೆಗಳಿಂದ ಕೆಲವು ಮಂದಿ ಪಿಎಫ್‌ಐ ಮುಖಂಡರನ್ನು ರಾಷ್ಟ್ರೀಯ ತನಿಖಾ ಏಜೆನ್ಸಿಯ ನೆರವಿನೊಂದಿಗೆ ಬೆಂಗಳೂರು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಅಲ್ಲದೆ ಈ ವೇಳೆ ಕೆಲವು ಸಾಕ್ಷ್ಯಗಳನ್ನು ಕೂಡ ಪೊಲೀಸರು ಸಂಗ್ರಹಿಸಿ ಮರಳಿದ್ದರು ಎಂದು ತಿಳಿದುಬಂದಿದೆ.

ಇದೀಗ ಮತ್ತಷ್ಟು ಮಾಹಿತಿ ಸಂಗ್ರಹಕ್ಕಾಗಿ ಬೆಂಗಳೂರಿನ ಬೈಯಪ್ಪನಹಳ್ಳಿ ಇನ್‌ಸ್ಪೆಕ್ಟರ್ ವೆಂಕಟಾಚಲಪತಿ ಮತ್ತು ಆಡುಗೋಡಿ ಇನ್‌ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡವು ಮಂಗಳೂರಿಗೆ ಆಗಮಿಸಿ ಪೊಲೀಸ್ ಕಮಿಷನರೇಟ್ ಮತ್ತು ದ.ಕ. ಜಿಲ್ಲಾ ಎಸ್ಪಿ ವ್ಯಾಪ್ತಿಯ ಪೊಲೀಸರ ಸಹಕಾರ ಪಡೆದು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News