ಬೆಂಗಳೂರಿನಲ್ಲಿ ಶೀಘ್ರದಲ್ಲೇ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿ; ಬಿಬಿಎಂಪಿ

Update: 2022-10-19 18:07 GMT

ಬೆಂಗಳೂರು, ಅ.19: ನಗರದಲ್ಲಿ ಸ್ಮಾರ್ಟ್ ಪಾರ್ಕಿಂಗ್ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಅದನ್ನು ತ್ವರಿತವಾಗಿ ಟೆಂಡರ್ ಮಾಡಿ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ್ ತಿಳಿಸಿದ್ದಾರೆ. 

ಬುಧವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಗರದ ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿದ್ದು, ಸಂಬಂಧಪಟ್ಟವರಿಗೆ ನೋಟೀಸ್ ನೀಡಿ ದಂಡ ವಿಧಿಸಲಾಗುವುದು. ಜೊತೆಗೆ ಪಾದಚಾರಿ ಮಾರ್ಗದಲ್ಲಿ ಒತ್ತುವರಿ ಜಾಗವನ್ನು ತೆರವುಗೊಳಿಸಲಾಗುವುದು ಎಂದು ಹೇಳಿದರು.

ಬಿಡಾಡಿ ದನ, ಹಸುಗಳನ್ನು ರಸ್ತೆ ಮೇಲೆ ಬಿಟ್ಟರೆ ಪಶುಪಾಲನಾ ವಿಭಾಗದ ಅಧಿಕಾರಿಗಳು ಪಾಲಿಕೆ ವಶಕ್ಕೆ ಪಡೆದು ದಂಡ ವಿಧಿಸಲು ಕ್ರಮ ಕೈಗೊಳ್ಳುವಂತೆ ವಿಭಾಗದ ಜಂಟಿ ಆಯುಕ್ತಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News