ದೈವ ನರ್ತಕರಿಗೆ 2 ಸಾವಿರ ರೂ. ಮಾಸಾಶನ ನೀಡಲು ನಿರ್ಧಾರ: ಸಚಿವ ಸುನಿಲ್ ಕುಮಾರ್

Update: 2022-10-20 09:06 GMT

ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ,60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಹೆಯಾನ 2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ. @BJP4Karnataka pic.twitter.com/svxnkl4zju

— Sunil Kumar Karkala (@karkalasunil) October 20, 2022

ಬೆಂಗಳೂರು: ದೈವ ನರ್ತನ ಮಾಡುವವ ಕಲಾವಿದರಿಗೆ ಮಾಸಾಶನ ಕೊಡಲು ತೀರ್ಮಾನ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ''ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ,60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಹೆಯಾನ 2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ'' ಎಂದು ತಿಳಸಿದ್ದಾರೆ.

ಇದನ್ನೂ ಓದಿ: ಭೂತ ಕೋಲದ ಬಗ್ಗೆ ಅವಹೇಳನ ಆರೋಪ: ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಗೆ ದೂರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News