ಬೆಳಗಾವಿ: ಎಸೆಸೆಲ್ಸಿ ವಿದ್ಯಾರ್ಥಿಯ ಹತ್ಯೆ

Update: 2022-10-20 09:58 GMT

ಬೆಳಗಾವಿ: ಎಸೆಸೆಲ್ಸಿ (SSLC) ವಿದ್ಯಾರ್ಥಿಯೋರ್ವನನ್ನು ಮಾರಕಾಸ್ತ್ರಗಳಿಂದ ಇರಿದು, ಕೊಲೆ ಮಾಡಿರುವ ಘಟನೆ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ವರದಿಯಾಗಿದೆ.  

ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಹತ್ಯೆಗೀಡಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. 

ಈ ವಿದ್ಯಾರ್ಥಿ ನಾಪತ್ತೆಯಾದ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಗುರುವಾರ ಅರೆಬೆತ್ತಲೆ ಸ್ಥಿತಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಈತ ಧರಿಸಿದ್ದ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ ಎನ್ನಲಾಗಿದೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News