×
Ad

ಉಡುಪಿ ಬ್ಲಾಕ್ ಕಾಂಗ್ರೆಸ್‌ನಿಂದ ರಕ್ತದಾನ ಶಿಬಿರ

Update: 2022-10-20 16:56 IST

ಉಡುಪಿ : ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರವನ್ನು ಗುರುವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.

ಶಿಬಿರವನ್ನು ಕಾಂಗ್ರೆಸ್ ಹಿರಿಯ ಮುಖಂಡ ನರಸಿಂಹ ಮೂರ್ತಿ ಉದ್ಘಾಟಿಸಿ ದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಉಡುಪಿ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ತೀವ್ರ ಅಭಾವ ಇರುವುದ ರಿಂದ ತೀರ ಬಡತನದಲ್ಲಿರುವ ರೋಗಿಗಳು ರಕ್ತಕ್ಕಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ಮನಗಂಡು ಬಡವರ ಕಣ್ಣೀರು ಒರೆಸುವ ನಿಟ್ಟಿನಲ್ಲಿ ಈ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್,  ಕಾಂಗ್ರೆಸ್ ಮುಖಂಡರಾದ ಭುಜಂಗ ಶೆಟ್ಟಿ, ಕುಶಲ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ವರೋನಿಕಾ ಕರ್ನೆಲಿಯೋ, ಮೀನಾಕ್ಷಿ ಮಾಧವ ಬನ್ನಂಜೆ, ಫಾ.ವಿಲಿಯಂ  ಮಾರ್ಟಿಸ್, ಡಾ.ಸುನೀತಾ ಶೆಟ್ಟಿ, ಉದ್ಯಾವರ ನಾಗೇಶ್ ಕುಮಾರ್, ರೋಶನಿ ಒಲಿವೆರಾ, ವಿಜಯ ಪೂಜಾರಿ, ಹಮದ್, ಸೌರಭ್ ಬಲ್ಲಾಳ್ ಮೊದಲಾದ ವರು ಉಪಸ್ಥಿತರಿದ್ದರು.

ಗಣೇಶ್ ನೆರ್ಗಿ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ವಕ್ತಾರ ಸತೀಶ್ ಕೊಡವೂರು ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಹಲವು ಮಂದಿ ರಕ್ತ ದಾನ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News