×
Ad

ನಾಡದೋಣಿಗಳಿಗೆ ಸೀಮೆ ಎಣ್ಣೆ ಪೂರೈಸಲು ಮನವಿ

Update: 2022-10-20 18:34 IST

ಪಡುಬಿದ್ರಿ: ನಾಡದೋಣಿ ಮೀನುಗಾರರಿಗೆ ಸೀಮೆ ಎಣ್ಣೆ ಪೂರೈಕೆ ಮಾಡಲು ಸರಕಾರದ ಮೇಲೆ ಒತ್ತಡ ತಂದು ಪೂರೈಕೆಗೆ ಅನುವು ಮಾಡಿಕೊಡುವುದಾಗಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್  ಭರವಸೆ ನೀಡಿದ್ದಾರೆ.

ಕಳೆದ 2 ತಿಂಗಳಿಂದ ನಾಡದೋಣಿ ಮೀನುಗಾರರಿಗೆ ಸೀಮೆ ಎಣ್ಣೆ ಪೂರೈಕೆ ಸ್ಥಗಿತಗೊಳಿಸಲಾಗಿದ್ದು, ತಕ್ಷಣ ಸೀಮೆಎಣ್ಣೆ ಪೂರೈಸುವಂತೆ ಹೆಜಮಾಡಿ ಪಟ್ಟೆಬಲೆ ಮತ್ತು ಕಂತಬಲೆ ಯೂನಿಯನ್ ಶಾಸಕ ಲಾಲಾಜಿ ಆರ್.ಮೆಂಡನ್‍ರವರಿಗೆ ಮನವಿ ಸಲ್ಲಿಸುವ ವೇಳೆ ಮಿನುಗಾರರಿಗೆ ಅವರು ಭರವಸೆ ನೀಡಿದರು. 

ವರ್ಷಂಪ್ರತಿ ಮಳೆಗಾಲ ಮುಗಿದ ಬಳಿಕ ನಾಡದೋಣಿಗಳಿಗೆ ಸಬ್ಸಿಡಿಯುಕ್ತ ಸೀಮೆಎಣ್ಣೆ ನೀಡಲಾಗುತ್ತಿತ್ತು. ಮಳೆಗಾಲದ ಬಳಿಕ 2 ತಿಂಗಳು ಬಡ ನಾಡದೋಣಿ ಮೀನುಗಾರರಿಗೆ ಹೆಚ್ಚು ಸಂಪಾದನೆಯ ಸಮಯ. ಅತೀ ಹೆಚ್ಚು ಮತ್ಸ್ಯ ಸಂಪತ್ತು ಇದೇ ಸಮಯದಲ್ಲಿ ದೊರೆಯುತ್ತದೆ. ಆದರೆ ಸೀಮೆಎಣ್ಣೆ ದೊರೆಯದೆ ಮೀನುಗಾರಿಕೆಯನ್ನೆ ಸ್ಥಗಿತಗೊಳಿಸುವ ಹಂತಕ್ಕೆ ಮೀನುಗಾರರು ತಲುಪಿದ್ದಾರೆ. ಇದರಿಂದ ಬಡ ಕುಟುಂಬಗಳು ಕಂಗಾಲಾಗಿದ್ದಾರೆ. ತಕ್ಷಣ ಮಧ್ಯ ಪ್ರವೇಶಿಸಿ ಸೀಮೆಎಣ್ಣೆ ಪೂರೈಸುವಂತೆ ಮೀನುಗಾರರು ಶಾಸಕರೊಂದಿಗೆ ಅವಲತ್ತುಕೊಂಡರು. 

ಈ ಸಂದರ್ಭ ಯೂನಿಯನ್ ಅಧ್ಯಕ್ಷ ಏಕನಾಥ ಕರ್ಕೇರ, ಉಪಾಧ್ಯಕ್ಷ ಮುಕುಂದ ಕುಂದರ್, ಪ್ರಧಾನ ಕಾರ್ಯದರ್ಶಿ ಗೋವರ್ಧನ ಕೋಟ್ಯಾನ್, ಕೋಶಾಧಿಕಾರಿ ದಿನೇಶ್ ಸುವರ್ಣ, ಸದಸ್ಯ ನಿಖಿಲ್ ಕುಂದರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News